ಮೊಬೈಲ್ ನಲ್ಲೇ ಇಕೆವೈಸಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

Written by Ramlinganna

Updated on:

PM kisan date extended ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಮತ್ತೇ ಸೆಪ್ಟೆಂಬರ್ 14 ರವರೆಗೆ ಕಾಲಾವಕಾಶ ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಬೇಕಾದರೆ ಇನ್ನುಮುಂದೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನೀವು ಇಕೆವೈಸಿ ಮಾಡಿಸದಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಲಾಭ ಸಿಗುವುದಿಲ್ಲ. ಇಕೆವೈಸಿಯನ್ನು ಎಲ್ಲಿ ಮಾಡಿಸಬೇಕು? ಹೇಗೆ ಮಾಡಿಸಬೇಕೆಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರು ಹಾಗೂ ಹೊಸದಾಗಿ ನೋಂದಣಿ ಮಾಡಿಕೊಂಡ ರೈತರು ಸೆಪ್ಟೆಂಬರ್ 14 ರೊಳಗಾಗಿ ಇಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ತಿಳಿಸಲಾಗಿದೆ. ಇಕೆವೈಸಿ ಮಾಡಿಸುವ ಅವಧಿಯನ್ನು ರೈತರಿಗೆ ನಾಲ್ಕೈದು ಸಲ ವಿಸ್ತರಿಸಲಾಗಿದೆ. ಆದರೂ ಇನ್ನೂ ಬಹುತೇಕ ರೈತರು ಇಕೆವೈಸಿ ಮಾಡಿಸದೆ ಇರುವುದರಿಂದ ರೈತರಿಗೆ ಸೆ. 14ರವರೆಗೆ ಕಾಲಾವಕಾಶ ನೀಡಲಾಗಿದೆ.

ಭೂ ಒಡೆತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ ಮೂರು ಕಂತುಗಳಲ್ಲಿ ವಾರ್ಷಿಕವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಒಟ್ಟು10 ಸಾವಿರ ರೂಪಾಯಿ ಜಮೆ ಮಾಡಲಾಗುವುದು.

ಇಕೆವೈಸಿ ಎಲ್ಲಿ ಮಾಡಿಸಬೇಕು?

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಂಡ ಫಲಾನುಭವಿಗಳು ಇಕೆವೈಸಿಯನ್ನು ಮೊಬೈಲ್ ನಲ್ಲೇ ಮಾಡಿಕೊಳ್ಳಬಹುದು. ಒಂದು ವೇಳೆ ಮೊಬೈಲ್ ನಲ್ಲಿಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಸಮಸ್ಯೆಯಾಗುತ್ತಿದ್ದರೆ ಸಮೀಪದ ಸಿಎಸ್.ಸಿ  ಕೇಂದ್ರಗಳು, ಗ್ರಾಮ ಒನ್, ರೈತ ಸಂಪರ್ಕ ಕೇಂದ್ರ, ಆಯಾ ತಾಲೂಕಿನ ಕೃಷಿ ನಿರ್ದೇಶಕರ ಕಚೇರಿಯಲ್ಲಿಯೂ ಮಾಡಿಸಬಹುದು.

ಇಕೆವೈಸಿ ಏಕೆ ಮಾಡಿಸಬೇಕು?

ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಪಡೆಯಬೇಕಾದರೆ ರೈತರು ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ನಿಜವಾದ ಫಲಾನುಭವಿಗಳಿಗೆ ಈ ಸೌಲಭ್ಯ ತಲುಪಿಸುವುದಕ್ಕಾಗಿ ಕೇಂದ್ರ ಸರ್ಕಾರವು ಇಕೆವೈಸಿಯನ್ನು ಕಡ್ಡಾಯಗೊಳಿಸಿದೆ.

PM kisan date extended ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲೇ ಇಕೆವೈಸಿಯನ್ನು ಪೂರ್ಣಗೊಳಿಸಬಹುದು. ಹೌದು, ಇದಕ್ಕಾಗಿ ರೈತರು ಯಾರ ಸಹಾಯವೂ ಇಲ್ಲದೆ ಅತೀ ಸುಲಭವಾಗಿ ಮಾಡಬಹುದು. ಇಕೆವೈಸಿ ಮಾಡಿಸಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪಿಎಂ ಕಿಸಾನ್ ಯೋಜನೆಯ  ವೆಬ್ ಪೇಜ್ ನಲ್ಲಿ ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ಕಾಣುತ್ತದೆ. ಅಲ್ಲಿ ರೈತರು ಆಧಾರ್ ಕಾರ್ಡ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್  ನಮೂದಿಸಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನೀವು ಇಕೆವೈಸಿ ಮಾಡಿಸಿದ್ದರೆ ಇಕೆವೈಸಿ ಪ್ರಕ್ರಿಯೆ ಯಶಸ್ವಿಯಾಗಿದೆ ಎಂಬ ಮೆಸೆಜ್ ಕಾಣುವುದು. ಇಲ್ಲದಿದ್ದರೆ ನಿಮ್ಮ ಮೊಬೈಲಿಗೆ ಬರುವ ಓಟಿಪಿ ನಮೂದಿಸಿ ಇಕೆವೈಸಿಯನ್ನು ಮೊಬೈಲ್ ನಲ್ಲೇ ಮಾಡಿಸಬಹುದು.

ಇದನ್ನೂ ಓದಿಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗುತ್ತೋ ಇಲ್ಲವೋ?  ಚೆಕ್ ಮಾಡಿ

ಸೆಪ್ಟೆಂಬರ್ 14 ರೊಳಗಾಗಿ ಇಕೆವೈಸಿಯನ್ನು ಮಾಡಿಸದೇ ಇರುವ ರೈತರಿಗೆ ಯಾವುದೇ ಕಾರಣಕ್ಕೂ ಮುಂದಿನ ಕಂತಿನ ಹಣ ರೈತರ ಖಾತೆಗೆ ಜಮೆಯಾಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಪಿಎಂ ಕಿಸಾನ್ ಯೋಜನೆಯಡಿ ಕರ್ನಾಟಕದ ರೈತರಿಗೇಕೆ 10 ಸಾವಿರ ಜಮೆ?

ಕೇಂದ್ರ ಸರ್ಕಾರವು ಪ್ರತಿ ವರ್ಷ ಮೂರು ಕಂತುಗಳಲ್ಲಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿದ ರೈತರಿಗೆ ಜಮೆ ಮಾಡುತ್ತದೆ. ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆ ಮಾಡುತ್ತದೆ. ಈ ಯೋಜನೆಯಡಿಯಲ್ಲಿಯೇ ರಾಜ್ಯ ಸರ್ಕಾರವು ನಾಲ್ಕು ಸಾವಿರ ರೂಪಾಯಿಯನ್ನು ಹೆಚ್ಚುವರಿಯಾಗಿ ರೈತರ ಖಾತೆಗೆ ಜಮೆ ಮಾಡುತ್ತಿದೆ. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೊಳಿಸಿದ್ದಾರೆ.

Leave a Comment