PMkisan Eligible ineligible list ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Published on:

PMkisan Eligible ineligible list ನಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ರೈತರು  ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ತಮ್ಮ ಅರ್ಹ ಮತ್ತು ಅನರ್ಹ ರೈತರ ಪಟ್ಟಿಯಲ್ಲಿ ಹೆಸರು ಚೆಕ್ ಮಾಡಲು ಎಲ್ಲಿಯೂ ಹೋಗಬೇಕಿಲ್ಲ, ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ಅತೀ ಸುಲಭವಾಗಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

PMkisan Eligible ineligible list ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಗೆ ಈಗಾಗಲೇ ತಮ್ಮ ಹೆಸರು ನೋಂದಣಿ ಮಾಡಿಸಿದ ರೈತರು ಅರ್ಹ ಮತ್ತು ಅನರ್ಹ ಈ ಎರಡು ಪಟ್ಟಿಯಲ್ಲಿ ತಮ್ಮ ಹೆಸರು ಯಾವುದರಲ್ಲಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/VillageDashboard_Portal.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಗ್ರಾಮವಾರು ಯಾವ ಯಾವ ರೈತರು ಯೋಜನೆಗೆ ಅರ್ಹ ಮತ್ತು ಅನರ್ಹರಾಗಿದ್ದಾರೆ ಎಂಬುದನ್ನು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು  ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕಿನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Submit ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ Aadhaar Authentication status  ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲ್ಲಿ ನಿಮಗೆ successfully Authenticated  ಪಟ್ಟಿ ಕಾಣಿಸುತ್ತದೆ. ಈ ಪಟ್ಟಿಯಲ್ಲಿರುವ ರೈತರೆಲ್ಲರೂ ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿರುತ್ತಾರೆ.

ಇದೇ ರೀತಿ Total Ineligible ಪಟ್ಟಿ ಕಾಣಿಸುತ್ತದೆ. ಆ ಲೀಸ್ಟ್ ನಲ್ಲಿರುವವ ರೈತರಿಗೆ ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಜಮೆಯಾಗುವುದಿಲ್ಲ.

ಒಂದು ವೇಳೆ  ಅರ್ಹತೆ ಹೊಂದಿರುವ   ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೂ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತಿಲ್ಲವಾದರೆ ನಿಮ್ಮ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಬೇಕು. ಅಂದರೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಜಮೀನಿನ ದಾಖಲೆ (ಪಹಣಿ) ಆರ್.ಟಿ.ಸಿ ಯಲ್ಲಿ ನಿಮ್ಮ ಹೆಸರು ಹಾಗೂ ತಂದೆಯ ಹೆಸರು ಒಂದೇ ರೀತಿಯಾಗಿರಬೇಕು. ಒಂದು ವೇಳೆ ಹೆಸರು ತಾಳೆಯಾಗದಿದ್ದರೂ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ಇಕೆವೈಸಿ ಮಾಡಿಸಿರಬೇಕು. ಇಕೆವೈಸಿ ಮಾಡಿಸದಿದ್ದರೂ ಮುಂದಿನ ಕಂತಿನ ಹಣ ಜಮೆಯಾಗುವುದಿಲ್ಲ.

ಇದನ್ನೂ ಓದಿ 18. 44 ಕೋಟಿ ಬೆಳೆ ವಿಮೆ ಹಣ ಬಿಡುಗಡೆ: ನಿಮ್ಮ ಖಾತೆಗೆ ಜಮೆ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಇಕೆವೈಸಿ ಮಾಡಿಸುವುದು ಕಡ್ಡಾಯ ಮಾಡಲಾಗಿದೆ. ಯಾವ ಯಾವ ರೈತರ ಇಕೆವೈಸಿ ಆಗಿಲ್ಲವೋ ಅವರ ಹೆಸರುಗಳನ್ನು ಗ್ರಾಮ ಪಂಚಾಯತ್ ಅಥವಾ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿರುತ್ತದೆ. ರೈತರು ಆಯಾ ಗ್ರಾಮ ಪಂಚಾಯತ್ ನಲ್ಲಿ ಹೋಗಿ ಇಕೆವೈಸಿ ಆಗದೆ ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು. ಅಥವಾ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು.

ರೈತರು ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೂ ಚೆಕ್ ಮಾಡಿಕೊಳ್ಳಬಹುದು. ಗೂಗಲ್ ನಲ್ಲಿ PM kisan ekyc  ಎಂದು ಟೈಪ್ ಮಾಡಬೇಕು. ಅಲ್ಲಿ ಓಟಿಪಿ ಬೇಸ್ಡ್ ಇಕೆವೈಸಿ ಮೇಲೆ ಕ್ಲಿಕ್ ಮಾಡಿದಾಗ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಇಕೆವೈಸಿ ಆಗದೆ ಇದ್ದರೆ  ಇಕೆವೈಸಿ ಮಾಡಿಸಿಕೊಳ್ಳಬೇಕು.

Leave a Comment