PMkisan scheme money increase ಪಿಎಂ ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಸಿದ ರೈತರಿಗೆ ಅತೀ ಶೀಘ್ರದಲ್ಲಿ ಸಂತಸದ ಸುದ್ದಿ ಸಿಗಲಿದೆ. ಹೌದು, ಪಿಎಂ ಕಿಸಾನ್ ಯೋಜನೆಯ ಹಣವನ್ನು ಆರು ಸಾವಿರ ರೂಪಾಯಿಯಿಂದ ಎಂಟು ಸಾವಿರ ರೂಪಾಯಿಗೆ ಏರಿಸುವ ಸಾಧ್ಯತೆಯಿದೆ. ಈ ಹಣವನ್ನು ನಾಲ್ಕು ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುವುದು. ಇದಕ್ಕಿಂತ ಮುಂಚೆ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಮೂರು ಕಂತುಗಳಲ್ಲಿ ಜಮೆ ಮಾಡಲಾಗುತ್ತಿತ್ತು.
ಇದೇ ವರ್ಷ ಏಪ್ರೀಲ್ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಮುನ್ನ ಯೋಜನೆಯ ಹಣವನ್ನು ಹೆಚ್ಚಿಸುವ ಸಾಧ್ಯತೆಯ ಇದೆ. ಹೌದು, ಚುನಾವಣೆ ಸಂದರ್ಭದಲ್ಲಿ ಆಡಳಿತ ಸರ್ಕಾರಗಳು ಹೊಸ ಹೊಸ ಘೋಷಣೆ ಘೋಷಿಸುತ್ತದೆ. ಹಾಗಾಗಿ ಬರುವ ಲೋಕಸಭಾ ಚುನಾವಣೆ ಪೂರ್ವದಲ್ಲಿ ರೈತರಿಗೆ ಸಂತಸದ ಸುದ್ದಿ ಸಿಗುವ ಲಕ್ಷಣಗಳು ಕಾಣುತ್ತಿವೆ.
ಏನಿದು ಪಿಎಂ ಕಿಸಾನ್ ಯೋಜನೆ?
ಪಿಎಂ ಕಿಸಾನ್ ಯೋಜನೆಯನ್ನು 2018-19 ರ ಸಾಲಿನಲ್ಲಿ ಆರಂಭಿಸಲಾಯಿತು. ರೈತರಿಗೆ ಆರ್ಥಿಕ ಸಹಾಯವಾಗಲೆಂಬ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ 2 ಸಾವಿರ ರೂಪಾಯಿನ್ನು ಜಮೆ ಮಾಡಲಾಗುತ್ತಿದೆ. ಹೀಗೆ ಸಮಾನವಾಗಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿಯನ್ನು ಪ್ರತಿ ನಾಲ್ಕು ತಿಂಗಳಿಗೆ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.
ಇದನ್ನೂ ಓದಿ : ನಿಮಗೆಷ್ಟು ಬೆಳೆ ಹಾನಿ ಪರಿಹಾರ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆ ಮಾತ್ರವಲ್ಲ, ಈ ಯೋಜನೆಯೊಂದಿಗೆ ಗರೀಬ್ ಕಲ್ಯಾಣ ಅನ್ನ ಯೋಜನೆಯ ಮೊತ್ತವನ್ನು ಸಹ ಹೆಚ್ಚಿಸುವ ಸಾಧ್ಯತೆಯಿದೆ. ಅತೀ ಶೀಘ್ರದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಬಹುದು.
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನುಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಹಾಕಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ನೀವು ಇಕೆವೈಸಿ ಮಾಡಿಸಿದ್ದರೆ ಇಕೆವೈಸಿ ಇಸ್ ಸಕ್ಸೆಸಫುಲಿ ಡನ್ ಎಂಬ ಮೆಸೆಜ್ ಬರುತ್ತದೆ. ಇಕೆವೈಸಿ ಮಾಡಿಸದಿದ್ದರೆ ನಂತರ ನಿಮ್ಮಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಇದಾದ ನಂತರ ನೀವು ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು.
PMkisan scheme money increase ಪಿಎಂ ಕಿಸಾನ್ ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿವೆ?
ಪಿಎಂ ಕಿಸಾನ್ ಯೋಜನೆಯಡಿ ಇಲ್ಲಿಯವರೆಗೆ 15 ಕಂತುಗಳು ರೈತರ ಖಾತೆಗೆ ಜಮೆ ಮಾಡಲಾಗಿದೆ. 2019 ರಿಂದ ಒಟ್ಟು 15 ಕಂತುಗಳಿಂದ 30 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡಲಾಗಿದೆ. ಒಟ್ಟಾರೆ 2.75 ಲಕ್ಷ ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.
ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣವನ್ನು ಜುಲೈ ತಿಂಗಳಲ್ಲಿ ಜಮೆ ಮಾಡಲಾಗಿತ್ತು. 15ನೇ ಕಂತಿನ ಹಣವನ್ನು ನವೆಂಬರ್ 15 ರಂದು ಜಮೆ ಮಾಡಲಾಗಿತ್ತು. ಈಗ 16ನೇ ಕಂತಿನ ಹಣ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಜಮೆ ಮಾಡುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ದೇಶದ ರೈತರಿಗೆ ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಜಮೆ ಮಾಡುವ ಸಾಧ್ಯತೆಯಿದೆ. ಕೂಡಲೇ ರೈತರು ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಲು ಸಮಸ್ಯೆಯಾಗುತ್ತಿದ್ದರೆ ಹತ್ತಿರದ ಸಿಎಸ್.ಸಿ, ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಭಹುದು.