ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

Written by Ramlinganna

Updated on:

PM kisan Beneficiary status ರೈತರು ಪಿಎಂ ಕಿಸಾನ್ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲೇ ಪಿಎಂ ಕಿಸಾನ್ ಸ್ಟೇಟಸನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ?  ಇಲ್ಲಿದೆ ಮಾಹಿತಿ.

ತಮಗೆಲ್ಲಾ ಗೊತ್ತಿದ್ದ ಹಾಗೆ ಈಗಾಗಲೇ ಪಿಎಂ ಕಿಸಾನ್ ಯೋಜನೆಯ 15 ಕಂತುಗಳು ರೈತರ ಖಾತೆಗೆ ಜಮೆ ಮಾಡಲಾಗಿದೆ. ಕಳೆದ ತಿಂಗಳು ಪಿಎಂ ಕಿಸಾನ್ ಯೋಜನೆಯ15 ನೇ ಕಂತು ಜಮೆ ಮಾಡಲಾಗಿತ್ತು. ಈಗ 16 ನೇ ಕಂತಿಗಾಗಿ ಕಾಯುತ್ತಿರುವ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಇಲ್ಲಿಯವರೆಗೆ ರೈತರಿಗೆ ಎಷ್ಟು ಕಂತುಗಳು ಜಮೆಯಾಗಿದೆ? ಒಂದು ವೇಳೆ ರೈತರಿಗೆ ಹಿಂದಿನ ಕಂತುಗಳು ಜಮೆಯಾಗದೆ ಇದ್ದರೆ ಯಾವ ಕಾರಣಕ್ಕಾಗಿ ಹಣ ಜಮೆಯಾಗಿಲ್ಲ? ಒಂದು ವೇಳೆ ಹಣ ಜಮೆಯಾಗುವುದನ್ನು ತಡೆಹಿಡಿದಿದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

PM kisan Beneficiary status ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Enter Registration No ನಲ್ಲಿರೈತರು  ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ . Captcha Code ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ಒಂದು ವೇಳೆ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನೆನಪಿಲ್ಲವಾದರೆ  Know your Registration ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್  ನಮೂದಿಸಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ನಂಬರ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಓಟಿಪಿ ನಮೂದಿಸಿ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನಿಮಗೆ ಹಣ ಜಮಯಾಗಿರುವುದನ್ನು ಚೆಕ್ ಮಾಡಬಹುದು.

ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ ಹಣವನ್ನು ಮೂರು ಕಂತುಗಳಲ್ಲಿ ಜಮೆಯಾಗುತ್ತದೆ. ಹೌದು, ಪ್ರತಿ ವರ್ಷ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ಹಾಗೂ ಒಟ್ಟು ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಜಮೆಯಾಗಲಿದೆ.

ಇದನ್ನೂ ಓದಿ FRUITS ID ಯಲ್ಲಿ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ? ಚೆಕ್ ಮಾಡಿ

ಫೆಬ್ರವರಿ 28 ರಂದು ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಜಮೆಯಾಗಿದೆ ನಿಮ್ಮ ಖಾತೆಗೆ ಜಮೆಯಾಗಿದೆಯೋ ಇಲ್ಲವೋ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ನಿಮ್ಮ ಇಕೆವೈಸಿ ಆಗಿದೆಯೇ?

ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿದ್ದರೆ ಮಾತ್ರ ನಿಮಗೆ ಮುಂದಿನ ಕಂತು ಜಮೆಯಾಗಲಿದೆ. ಇಲ್ಲದಿದ್ದರೆ ಮುಂದಿನ ಕಂತುಜಮೆಯಾಗುವುದಿಲ್ಲ. ಹಾಗಾಗಿ ರೈತರು ಇಕೆವೈಸಿ ಮಾಡಿಸಿಕೊಳ್ಳಬೇಕು. ಈಗಲೂ ಇನ್ನೂ ಅವಕಾಶವಿದೆ. ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಲು ರೈತರಿಗೆ ಅವಕಾಶವಿದೆ. ಜಮೀನಿನ ದಾಖಲೆಗಳು, ಆಧಾರ್ ಕಾರ್ಡ್, ಫೋಟೋ ದೊಂದಿಗೆ ರೈತರು ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಿಎಂ ಕಿಸಾನ್ ಯೋಜನೆಯ ಉಚಿತ ಸಹಾಯವಾಣಿ ನಂಬರಿಗೆ ಸಂಪರ್ಕಿಸಬಹುದು.

Leave a Comment