ಪಿಎಂ ಕಿಸಾನ್ ಯೋಜನೆ ಫಲಾನುಭವಿ ರೈತರಿಗೆ ಸಂತಸದ ಸುದ್ದಿ.  ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ರೈತರಿಗೆ  ಇಕೆವೈಸಿ ಕಡ್ಡಾಯ ದಿನಾಂಕವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ಹೌದು, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಇಕೆವೈಸಿ ಮಾಡಿಸುವ ದಿನಾಂಕವನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯ11ನೇ ಕಂತಿನ ಹಣ ಪಡೆಯಲು ಇಕೆವೈಸಿ ಕಡ್ಡಾಯಗೊಳಿಸಲಾಗಿತ್ತು. ಈ ದಿನಾಂಕವನ್ನು ಮಾರ್ಚ್ 31  ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಆದರೆ ವೆಬ್ಸೈಟ್ ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ರೈತರು ನೋಂದಣಿ ಮಾಡಿಕೊಳ್ಳಲು ಅಡ್ಡಿ ಉಂಟಾಗಿತ್ತು. ಹೀಗಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ  ಇಕೆವೈಸಿ ಮಾಡಿಸಲು ನೀಡಿದ್ದ ಗಡುವನ್ನು ಮೇ 31 ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.  ಈ ಕುರಿತು ಪಿಎಂ ಕಿಸಾನ್ ಯೋಜನೆಯ ವೆಬ್ ಸೈಟ್ ನಲ್ಲಿಯೂ ಮಾಹಿತಿ ನೀಡಲಾಗಿದೆ.

ರೈತರು ಮೊಬೈಲ್ ನಲ್ಲಿ ಇಕೆವೈಸಿ ಮಾಡಲು ಮೊದಲು ಅವಕಾಶ ನೀಡಲಾಗಿತ್ತು. ಪಿಎಂ ಕಿಸಾನ್ ಯೋಜನೆ ಪೇಜ್ ಬಲಗಡೆ ಕಾರ್ನರ್ ನಲ್ಲಿ ಇಕೆವೈಸಿ ಕಡ್ಡಾಯವೆಂಬ ಕಾಲಂ ಇತ್ತು. ಈಗ ಅದನ್ನು ತೆಗೆದು ಹಾಕಲಾಗಿದೆ. ಅತೀ ಶೀಘ್ರದಲ್ಲಿ ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸುವ ಪ್ರಕ್ರಿಯೆ ವೆಬ್ಸ್ ಸೈಟ್ ನಲ್ಲಿ ಅಪಡೇಟ್ ಮಾಡಬಹುದು.

ಏನಿದು ಪಿಎಂ ಕಿಸಾನ್ ಯೋಜನೆ?

ರೈತರ ಆದಾಯ ಹೆಚ್ಚಿಸುವುದಕ್ಕಾಗಿ ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು 2019 ರಲ್ಲಿ ಘೋಷಣೆ ಮಾಡಿದೆ. ಈ ಯೋಜನೆಯಡಿಯಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆ ಮಾಡಲಾಗುವುದು.  ಆರು ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ 10 ಕಂತುಗಳನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದೆ. 11ನೇ ಕಂತಿನ ಜಮೆಯಾಗಲು ಇಕೆವೈಸಿ ಕಡ್ಡಾಯಗೊಳಿಸಲಾಗಿದೆ.  ಆದರೆ ತಾಂತ್ರಿಕ ತೊಂದರೆಗಳಿಂದಾಗಿ ಇನ್ನೂ ಬಹಳಷ್ಟು ರೈತರು ಇಕೆವೈಸಿ ಮಾಡಿಸಿಲ್ಲ. ಹಾಗಾಗಿ ದಿನಾಕಂವನ್ನು ವಿಸ್ತರಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಏಪ್ರೀಲ್ ಮೊದಲ ವಾರದಲ್ಲಿ 11ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿತ್ತು. ಆದರೆ ಇಕೆವೈಸಿ ಕಡ್ಡಾಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿರುವುದರಿಂದ ಹನ್ನೊಂದನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗುವುದು ವಿಳಂಬವಾಗುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಅರ್ಹತೆಗಳು

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲು ರೈತರಿಗೆ 2 ಹೆಕ್ಟೇರ್ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭ ಪಡೆಯಬಹುದು. ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಲಾಭ ಪಡೆಯಬಹುದು. ರೈತರು ಆಧಾರ್ ಕಾರ್ಡ್ ಹೊಂದಿರಬೇಕು. ರೈತರ ಹೆಸರಿನ ಮೇಲೆ ಜಮೀನು ಇರಬೇಕು. ರೈತರಿಗೆ ಬ್ಯಾಂಕ್ ನಲ್ಲಿ ಖಾತೆ ಇರಬೇಕು.

ಇದನ್ನೂ ಓದಿ : ಸಾಲಮನ್ನಾ ಮಾಡಲು ಮತ್ತೊಮ್ಮೆ ಅವಕಾಶ- ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮೆ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ನೀವು ಪಿಎಂ ಕಿಸಾನ್ ಯೋಜನೆಯ ಉಪಯೋಗ ಪಡೆಯುವ ಅರ್ಹತೆಯಿದ್ದರೂ ಇದುವರೆಗೆ  ನೋಂದಣಿ ಮಾಡಿಸಿಲ್ಲವೇ. ಹಾಗಾದರೆ ಕೂಡಲೇ ಪಿಎಂ ಕಿಸಾನ್ ಯೋಜನೆ ವೆಬ್ಸೈಟ್ ನಲ್ಲಿ ನೋಂದಣಿ ಮಾಡಿಸಬಹುದು. ರೈತರೇ ತಮ್ಮ ಮೊಬೈಲ್ ನಲ್ಲಿ ಮನೆಯಲ್ಲಿಯೇ ಕುಳಿತು ನೋಂದಣಿ ಮಾಡಿಸಿಕೊಳ್ಳಬಹುದು. ಒಂದು ವೇಳೆ ಮೊಬೈಲ್ ನಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯಾಗಲಿ ನೋಂದಣಿ ಮಾಡಿಸಲು ಸಮಸ್ಯೆಯಾಗುತ್ತಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ರೈತರು ತಮ್ಮ ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್,  ಪಡಿತರ ಚೀಟಿ ಝರಾಕ್ಸ್ ಪ್ರತಿಗಳನ್ನು ಸಲ್ಲಿಸಿ ನೋಂದಣಿ ಮಾಡಿಸಬಹುದು.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಆನ್ಲೈನಲ್ಲಿಯೇ ಸ್ಟೇಟಸ್ ನೋಡಬಹುದು. ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ. ಯಾವ ಬ್ಯಾಂಕಿಗೆ ಯಾವ ದಿನಾಂಕದಂದು ಜಮೆಯಾಗಿದೆ ಎಂಬುದನ್ನುಸಹ  ನೋಡಬಹುದು.

ಇದನ್ನೂ ಓದಿ: ಜಮೀನುಗಳ ಸರ್ವೆ ನಂಬರ್ ಸಹಿತ ಬಂಡಿದಾರಿ, ಹಳ್ಳಕೊಳ್ಳಗಳ ಮ್ಯಾಪ್ ಬೇಕೆ? ಇಲ್ಲಿದೆ ಮಾಹಿತಿ

Leave a Reply

Your email address will not be published. Required fields are marked *