ಪ್ರಧಾನಿ ನರೇಂದ್ರ ಮೋದಿಯವರು ಜೂನ್ 7 (ಇಂದು) ಸಾಯಂಕಾಲ 5 ಗಂಟೆಗೆ (PM Modi to address the nation at 5 pm) ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಕಳೆದ ವರ್ಷದಿಂದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಅನೇಕ ಬಾರಿ ಮಾತನಾಡಿದ್ದಾರೆ. ಅಲ್ಲದೆ ಸಂದರ್ಭಕ್ಕೆ ತಕ್ಕಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಯಾವ ವಿಷಯದ ಬಗ್ಗೆ ಮಾತಾಡುತ್ತಾರೋ ಎಂಬ ಕುತೂಹಲ ಮೂಡಿದೆ.

ದೇಶದಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಇದೆ. ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಸಡಿಲಗೊಳಿಸಲಾಗಿದೆ. ಇನ್ನೂ ಕೆಲವೆಡೆ ಸಡಿಲಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಯಾವ ವಿಷಯದ ಬಗ್ಗೆ ಮಾತಾಡುತ್ತಾರೋ ಎಂಬ ಕುತೂಹಲ ಜನರಲ್ಲಿದೆ.

ಈಗಾಗಲೇ ದೇಶದಾಂತ ಕೊರೋನಾ ಪಾಸಿಟಿವ್ ಸಂಖ್ಯೆ ಕಡಿಮೆಯಾಗಿದೆ. ದಿನದಿಂದೇ ದಿನಕ್ಕೆ ಕಡಿಮೆಯಾಗುತ್ತಲೇ ಇದೆ. ಆದರೂ ಇಂದು ಸಾಯಂಕಾಲ ಪ್ರಧಾನಿ ನರೇಂದ್ರ ಮೋದಿಯವರು ಯಾವ ವಿಷಯದ ಬಗ್ಗೆ ಮಾತಾಡುತ್ತಾರೆ ಎಂಬ ಕುತೂಹಲ ಜನರಲ್ಲಿದೆ. ಲಾಕ್ಡೌನ್ ಸಡಿಲಿಕೆ ಬಗ್ಗೆ ಮಾತಾಡುತ್ತಾರೋ ಅಥವಾ ಮತ್ತೇನಾದರೂ ಪ್ಯಾಕೇಜ್ ಘೋಷಣೆ ಮಾಡುತ್ತಾರೋ ಎಂದು ಕುತೂಹಲ ಕಾಡುತ್ತಿದೆ.

ದೇಶದಲ್ಲಿ ಕೊರೋನಾ ಅಲೆ ಇದ್ದಾಗ ಅನೇಕ ಬಾರಿ ಮಾತನಾಡಿದ್ದರು. ಎರಡನೇ ಬಾರಿಯೂ ಮಾತನಾಡಿದ್ದರು. ದೇಶದ ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸಿದ್ದರು.

Leave a Reply

Your email address will not be published. Required fields are marked *