ರೈತರಿಗೆ ಗುಡ್ ನ್ಯೂಸ್ ನಾಳೆ ಪಿಎಂ ಕಿಸಾನ್ ಹಣ ಈ ರೈತರ ಖಾತೆಗೆ ಜಮೆ

Written by Ramlinganna

Published on:

Pmkisan 23rd installment release tomorrow : ರೈತ ಬಾಂಧವರಿಗೆ ಗುಡ್ ನ್ಯೂಸ್. ಹೌದು, ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಜಮೆಗಾಗಿ ಕಾಯುತ್ತಿರುವ ರೈತರಿಗೆ ಅತ್ಯಂತ ಸಂತಸ ಸುದ್ದಿ ಇದೀಗ ಬಂದಿದೆ.  ನಾಳೆ ಶನಿವಾರ ಮಧ್ಯಾಹ್ನ 3.30 ಗಂಟೆಗೆ ದೇಶದ ಎಲ್ಲಾ ಪಿಎಂ ಕಿಸಾನ್ ಯೋಜನೆಯ ಫಲಾನುಭವಿ ರೈತರ ಖಾತೆಗೆ ಹಣ ಜಮೆಯಾಗಲಿದೆ.

ಪ್ರಧಾನಿ ನರೇಂದ್ ಮೋದಿಯವರು ಜೂನ್ 20 ರಂದು ಪಶ್ಚಿಮ ಬಂಗಾಳ ರಾಜ್ಯದ ಹೂಗ್ಲಿಯ ತರಕೇಶ್ವರದಲ್ಲಿ ನಡೆಯುವ  ಕಾರ್ಯಕ್ರಮದಲ್ಲಿ  ಹಣ ಬಿಡುಗಡೆ ಮಾಡಲಿದ್ದಾರೆ. ದೇಶದ ಕೃಷಿ ಚಟುವಟಿಕೆಗೆ ಬೀಜ, ರಸಗೊಬ್ಬರ ಖರೀದಿಗೆ ಸಹಾಯವಾಗಲೆಂದು ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಹಾಗಾದರೆ ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.

ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ 9.44 ಕೋಟಿ ರೈತರ ಖಾತೆಗೆ 18880 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗುವುದು.

ರೈತರಿಗೆ ವಾರ್ಷಿಕ 6000 ರೂಪಾಯಿಗಳನ್ನು 3 ಕಂತುಗಳಲ್ಲಿ ಬಿಡುಗಡೆ ಮಾಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆ ಇದಾಗಿದೆ.

Pmkisan 23rd installment release tomorrow ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಸ್ಟೇಟ್ ನಲ್ಲಿ ನಮ್ಮ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಊರಿನಲ್ಲಿ ಯಾರು ಯಾರು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿದ್ದಾರೆ ಅವರ ಹೆಸರು ಕಾಣಿಸುತ್ತದೆ.

ಪಿಎಂ ಕಿಸಾನ್ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗಲಿದೆ

ಪಿಎಂ  ಕಿಸಾನ್ ಯೋಜನೆಯ ಹಣ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ಹಣ ಜಮೆಯಾಗುವುದಿಲ್ಲ. ಪಿಎಂ ಕಿಸಾನ್ ಫಲಾನುಭವಿಗಳು ಇಕೆವೈಸಿ ಮಾಡಿಸಿರಬೇಕು. ನಂತರ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿರಬೇಕು. ಫ್ರೂಟ್ಸ್ ಐಡಿ ಇಲ್ಲದಿದ್ದರೆ ಮುಂದಿನ ಕಂತು ಜಮೆಯಾಗುವುದಿಲ್ಲ. ಇನ್ನೂ ಸಮಯವಾಕಾಶವಿದೆ. ಯಾರು ಯಾರು ಫ್ರೂಟ್ಸ್ ಐಡಿಗೆ ನೋಂದಣಿ ಮಾಡಿಸಿಲ್ಲವೋ ಅವರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಇದಕ್ಕೆ ಆಧಾರ್ ಕಾರ್ಡ್. ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಸರ್ವೆ ನಂಬರ್ ಪಹಣಿ ಬೇಕಾಗುತ್ತದೆ. ಪಹಣಿ ಝರಾಕ್ಸ್ ಪ್ರತಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ ಹನಿ ನೀರಾವರಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನ

2019 ರ ಮೊದಲು ಯಾರ ಯಾರ ಹೆಸರಿಗೆ ಜಮೀನಿದೆಯೋ ಅಂತಹ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಹಣ ಜಮೆಯಾಗಲಿದೆ. ಕುಟುಂಬದಲ್ಲಿ ಸರ್ಕಾರದ ನೌಕರಸ್ಥರಿದ್ದರೆ ಆ ಕುಟುಂಬದಲ್ಲಿ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ.

ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ಪಹಣಿಯಲ್ಲಿ ಹೆಸರು ಒಂದೇ ಆಗಿರಬೇಕು. ಹೆಸರು ಸ್ವಲ್ಪ ವ್ಯತ್ಯಾಸವಿದ್ದರೂ ಸಹ ಪಿಎಂ ಕಿಸಾನ್ ಹಣ ಜಮೆಯಾಗುವುದಿಲ್ಲ. ಹಾಗಾಗಿ ಹೆಸರು ಒಂದೇ ರೀತಿ ಆಗಿರುವಂತೆ ನೋಡಿಕೊಳ್ಳಬೇಕು.

Leave a Comment