Pmkisan farmers new list ಪಿಎಂ ಕಿಸಾನ್ ಹೊಸ ಪಟ್ಟಿ ಬಿಡುಗಡೆ

Written by Ramlinganna

Updated on:

Pmkisan farmers new list : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಇಲ್ಲಿದೆ ಗುಡ್ ನ್ಯೂಸ್.  ಅದು ಏನಪಾ ಅಂದ್ರೆ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ಈಗ ಬಿಡುಗಡೆಯಾಗಿದೆ. ರೈತರು ತಮ್ಮಲ್ಲಿರುವ ಮೊಬೈಲ್ ನಲ್ಲಿ ಪಟ್ಟಿಯಲ್ಲಿ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಮುಂದಿನ ತಿಂಗಳ ಅಂತ್ಯದಲ್ಲಿ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ರೈತರು ಈಗಲೇ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿರುವುದನ್ನು ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ

Pmkisan farmers new list ಪಿಎಂ ಕಿಸಾನ್ ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹೊಸ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ನೀವು  ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ಅಲ್ಲಿ ನಿಮ್ಮ ಹೆಸರು ನೀವು ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ ಹಣ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ?

ಪಿಎಂ ಕಿಸಾನ್ ಯೋಜನೆಯ ಹಣ ಇಲ್ಲಿಯವರೆಗೆ ಒಟ್ಟು 17 ಕಂತುಗಳು ರೈತರ ಖಾತೆಗೆ ಜಮೆಯಾಗಿದೆ. ಈಗ 18ನೇ ಕಂತಿನ ಹಣ ಜಮೆಯಾಗಲಿದೆ. ಹೌದು, ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲಿ 18ನೇ ಕಂತಿನ ಹಣ ಜಮೆಯಾಗಲಿದೆ.

ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಬೇಕಾಗುವ ಅರ್ಹತೆಗಳು ಯಾವುವು?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇರಬೇಕು. ಹೌದು,  ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತಿ ಅಥವಾ ಪತ್ನಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.

ಇದನ್ನೂ ಓದಿ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಹಣ ಜಮೆ? ಹೀಗೆ ಚೆಕ್ ಮಾಡಿ 2024

ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.

ಪಿಎಂ ಕಿಸಾನ್ ರೈತರ ಇಕೆವೈಸಿ ಕಡ್ಡಾಯವಾಗಿ ಆಗಿರಬೇಕು?

ಪಿಎಂ ಕಿಸಾನ್ ಯೋಜನೆಯ 18ನೇ ಕಂತು ಪಡೆಯಲು ರೈತರು ಇಕೆವೈಸಿ ಕಡ್ಡಾಯವಾಗಿ ಮಾಡಿಸಿರಬೇಕು. ಇಲ್ಲದಿದ್ದರೆ ಅಂತಹ ರೈತರಿಗೆ ಹಣ ಜಮೆಯಾಗುವುದಿಲ್ಲ. ನಿಮ್ಮದು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಇಕೆವೈಸಿ ಚೆಕ್ ಮಾಡಲು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿದಾಗ ಇಕೆವೈಸಿ ಸಕ್ಸೆಸ್ಫಲಿ ಡನ್ ಎಂಬ ಸಂದೇಶ ಕಾಣಿಸುತ್ತದೆ. ಇಕೆವೈಸಿ ಆಗದಿದ್ದರೆ ಕೂಡಲೇ ನಿಮ್ಮ ಹತ್ತಿರದ ಸಿ.ಎಸ್.ಸಿ ಕೇಂದ್ರಗಳಲ್ಲಿ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಗೆ ಅರ್ಹತೆಯೊಂದಿಗೆ ಎಲ್ಲಾ ದಾಖಲೆಯಲ್ಲಿ ಹೆಸರು ಒಂದೇ ರೀತಿಯಾಗಿರಬೇಕು

ರೈತರ ಹೆಸರು ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಹಾಗೂ  ಬ್ಯಾಂಕ್ ಪಾಸ್ ಬುಕ್ ನಲ್ಲಿ ಒಂದೇ ರೀತಿಯಾಗಿರಬೇಕು. ಹೆಸರು  ಸ್ವಲ್ಪ ವ್ಯತ್ಯಾಸವಾಗಿದ್ದರೂ ಸಹ ಮುಂದಿನ 18ನೇ ಕಂತು ರೈತರಿಗೆ ಎಲ್ಲಾ ಅರ್ಹತೆಯಿದ್ದರೂ ಸಹ ಜಮೆಯಾಗುವುದಿಲ್ಲ.

Leave a Comment