PMkisan release date announced : ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ನಿಮಗೆ ಗೊತ್ತಾ . ಹೌದು, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ 20ನೇ ಕಂತಿನ ಹಣ ಮುಂದಿನ ವಾರ ಜಮೆಯಾಗಲಿದೆ ಎಂದು ಹೇಳಲಾಗುತ್ತಿದೆ.
ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ
ಹಾಗಾದರೆ ಯಾವ ದಿನಾಂಕ ಪಿಎಂ ಕಿಸಾನ್ ಹಣ ಬಿಡುಗಡೆಯಾಗಲಿದೆ? ಯಾರು ಯಾರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ? ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ 2 ಸಾವಿರ ರೂಪಾಯಿ ಜಮೆಯಾಗುವುದೋ? ಅಥವಾ ಈ ತಿಂಗಳ ಪಿಎಂ ಕಿಸಾನ್ ಯೋಜನೆಯ ಹಣ ಹೆಚ್ಚಳ ಮಾಡಲಾಗುವುದೇ ಎಂಬ ಚರ್ಚೆಗಳು ನಡೆಯುತ್ತಿವೆ.
ಪಿಎಂ ಕಿಸಾನ್ ಯೋಜನೆಯ ಹಣ ಯಾವಾಗ ಜಮೆಯಾಗಲಿದೆ?
ಪಿಎಂ ಕಿಸಾನ್ ಯೋಜನೆಯ 20 ನೇ ಕಂತಿನ ಹಣ ಜೂನ್ ಮೊದಲ ವಾರದಲ್ಲಿ ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು. ಎಂದು ಮೂಲಗಳಿಂದ ತಿಳಿದುಬಂದಿದೆ. ಕೇವಲ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಯಾವ ದಿನಾಂಕ ಯಾವ ರಾಜ್ಯದಿಂದ ಹಣ ಬಿಡುಗಡೆ ಮಾಡಲಾಗುವುದು ಎಂಬುದು ಅತೀ ಶಈಘ್ರಹದಲ್ಲಿ ಗೊತ್ತಾಗಲಿದೆ. .
PM kisan Money credit ಪಿಎಂ ಕಿಸಾನ್ ಇಕೆವೈಸಿ ಮಾಡಿಸುವುದು ಹೇಗೆ?
ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ರೈತರು ಈ
https://pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು.
ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಬೇಕಾಗುವ ಅರ್ಹತೆಗಳು ಯಾವುವು?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿದ್ದ ಮಾತ್ರಕ್ಕೆ ನಿಮಗೆ ಮುಂದಿನ ಕಂತು ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇರಬೇಕು. ಹೌದು, ನೀವು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀವು ನಿಮ್ಮ ಪತಿ ಅಥವಾ ಪತ್ನಿ ಅಥವಾ ಮಕ್ಕಳು ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : ನೀವು ಖರೀದಿಸುವ ಜಮೀನಿನ ಮಾಲೀಕರಾರು? ಇಲ್ಲೇ ಚೆಕ್ ಮಾಡಿ
ಒಂದು ವೇಳೆ ನಿಮ್ಮ ಕುಟುಂಬದಲ್ಲಿ ಸರ್ಕಾರಿ ನೌಕರರು ಯಾರಾದರೂ ಇದ್ದರೆ ನಿಮಗೆ ಯೋಜನೆಯ ಹಣ ಜಮೆಯಾಗುವುದಿಲ್ಲ. ಇದರೊಂದಿಗೆ ನಿಮ್ಮ ಕುಟುಂಬದಲ್ಲಿ ಪಿಂಚಣಿ ಪಡೆಯುವವರಿದ್ದರೂ ಸಹ ಹಣ ಜಮೆಯಾಗುವುದಿಲ್ಲ.
ಪಿಎಂ ಕಿಸಾನ್ ಈ ಪಟ್ಟಿಯಲ್ಲಿರುವ ರೈತರಿಗೆ ಹಣ ಜಮೆ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಹೆಸರು ಕೆಳಗಡೆ ನೀಡಲಾದ ಪಟ್ಟಿಯಲ್ಲಿದ್ದರೆ ಮಾತ್ರ ಜಮಯಾಗಲಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಫಲಾನುಭವಿಗಳ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಬ್ಲಾಕ್ ನಲ್ಲಿ ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡು ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನಲ್ಲಿ ಯಾವ ಯಾವ ರೈತರು ಫಲಾನುಭವಿಗಳಿದ್ದಾರೆ ಎಂಬ ಪಟ್ಟಿ ಕಾಣಿಸುತ್ತದೆ. ಎ ದಿಂದ ಹೆಸರು ಆರಂಭವಾಗುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನುಚೆಕ್ ಮಾಡಬಹುದು.






