Pmkisan status check now : ಪಿಎಂ ಕಿಸಾನ್ ಹಣ ಯಾವ ಕಾರಣಕ್ಕಾಗಿ ಜಮೆಯಾಗುತ್ತಿಲ್ಲ. ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ಈಗ ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಎಲ್ಲಾ ರೈತರಿಗೆ ಆರಂಭದಲ್ಲಿ ಹಣ ಜಮೆಯಾಗುತ್ತಿತ್ತು. ಆದರೆ ಬರುಬರುತ್ತಾ ಕೆಲವು ರೈತರಿಗೆ ಹಣ ಜಮೆ ಮಾಡುವುದನ್ನು ತಡೆ ಹಿಡಿಯಲಾಯಿತು. ಆದರೆ ಬಹುತೇಕ ರೈತರಿಗೆ ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲವೆಂಬುದೇ ಗೊತ್ತಿಲ್ಲ. ಈಗ ರೈತರು ಯಾವ ಕಾರಣಕ್ಕಾಗಿ ಹಣ ಜಮೆಯಾಗುತ್ತಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
Pmkisan status check now ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿದೆಯೋ ಇಲ್ಲವೋ ? ಹೀಗೆ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://pmkisan.gov.in/homenew.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ e-KYC ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇಕೆವೈಸಿ ಆಗಿದ್ದರೆ
e-KYC done successfully ಎಂಬ ಸಂದೇಶ ಕಾಣಿಸುತ್ತದೆ. ಒಂದು ವೇಳೆ ಇಕೆವೈಸಿ ಆಗಿದ್ದಿಲ್ಲವಾದರೆ ಇಕೆವೈಸಿ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇಕೆವೈಸಿ ಪ್ರಕ್ರಿಯೆ ಮುಗಿಯುತ್ತದೆ.
ಪಿಎಂ ಕಿಸಾನ್ ಹಣ ನಿಮಗೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ? ಚೆಕ್ ಮಾಡಿ
ಪಿಎಂ ಕಿಸಾನ್ ಹಣ ನಿಮ್ಮ ಖಾತೆಗೆ ಯಾವ ಕಾರಣಕ್ಕಾಗಿ ಜಮೆಯಾಗುತ್ತಿಲ್ಲವೆಂಬುದನ್ನು ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ Registration No ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ Get OTP ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಇದರೊಂದಿಗೆ ಯಾವ ಕಾರಣದಿಂದಾಗಿ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ ಎಂಬ ಮಾಹಿತಿ ಇಲ್ಲಿ ಕಾಣಿಸುತ್ತದೆ.
ಇಲ್ಲಿಯವರೆಗೆ ಎಷ್ಟು ಕಂತುಗಳು ಹಣ ಜಮೆಯಾಗಿದೆ?
ಪಿಎಂ ಕಿಸಾನ್ ಯೋಜನೆಗೆ ಇಲ್ಲಿಯವರೆಗೆ 21 ಕಂತುಗಳ ಹಣ ಜಮೆಯಾಗಿದೆ. ಕಳೆದ ನವೆಂಬರ್ ತಿಂಗಳ 19 ರಂದು 21ನೇ ಕಂತಿನ ಹಣ ಜಮೆಯಾಗಿತ್ತು. ಪ್ರತಿ ವರ್ಷ 6 ಕಂತುಗಳಲ್ಲಿ ತಲಾ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ಹಣ ಜಮೆ ಮಾಡಲಾಗುತ್ತಿದೆ.
ಇದನ್ನೂ ಓದಿ ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ ಬಂಡಿದಾರಿ ಇದೆಯೇ ಇಲ್ಲೇ ಚೆಕ್ ಮಾಡಿ
2019 ರಲ್ಲಿ ಪಿಎಂ ಕಿಸಾನ್ ಯೋಜನೆ ಆರಂಭವಾಗಿದೆ. ಎರಡು ಹೆಕ್ಟೇರ್ ಪ್ರದೇಶದ ಒಳಗಡೆ ಇರುವ ರೈತರಿಗೆ ಸಹಾಯ ಮಾಡಲೆಂದು ಈ ಯೋಜನೆಯನ್ನು ಆರಂಭಿಸಲಾಗಿದೆ. ರೈತರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿದ. 9 ಕೋಟಿಗಿಂತಲೂ ಅಧಿಕ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ ಮಾಡಲಾಗುತ್ತಿದೆ. 18 ಸಾವಿರ ಕೋಟಿಗಿಂತಲೂ ಅಧಿಕ ಹಣವನ್ನು ರೈತರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಕೆಲವು ರೈತರ ಖಾತೆಗೆ ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ಅವರಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲ.





