ಪೊಲೀಸ್ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಅರ್ಜಿ ಆಹ್ವಾನ

Written by By: janajagran

Updated on:

police constable recruitment ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 4000 ಹುದ್ದೆಗಳ ಭರ್ತಿಗೆ (police constable recruitment) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 26ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ (Qualification):

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 26 ಜೂನ್ 2021ಕ್ಕೆ ಅನ್ವಯವಾಗುವಂತೆ ಪಿಯುಸಿ ಪಾಸಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ(Age): ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಅಭ್ಯರ್ಥಿಗೆ ಕನಿಷ್ಟ 19 ರಿಂದ ಗರಿಷ್ಟ 25 ವಯೋಮಾನದೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಠ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.

ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ

ವೇತನ (Payment): ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ಅನುಸಾರವಾಗಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ 23,500 ರೂಪಾಯಿಯಿಂದ 47,670 ರೂಪಾಯಿಯವರೆಗೆ ವೇತನವಿರುತ್ತದೆ.

ಆಯ್ಕೆ ಪ್ರಕ್ರಿಯೆ (Selection method): ಲಿಖಿತ ಪರೀಕ್ಷೆ ನಡೆಯಲಿದೆ. ದೇಹದಾರ್ಡತೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ(fee): ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು 400 ರೂಪಾಯಿ, ಪ.ಜಾ., ಪಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200ರೂಪಾಯಿ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ(How to pay fee): ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://recruitment.ksp.gov.in/ ಗೆ ಭೇಟಿ ನೀಡಿ ಕೇಳಲಾದ ಶೈಕ್ಷಣಿಕ ದಾಖಲಾತಿ, ಜಾತಿ,ಆದಾಯ ಪ್ರಮಾಣ ಪತ್ರಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

police constable recruitment ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 26, 2021

ಜುಲೈ 27 ರಂದು ಉದ್ಯೋಗ ಮೇಳ

ಚಿತ್ರದುರ್ಗ ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಜುಲೈ 27 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್.ಸಿ, ಬಿಬಿಎಂ ಮತ್ತು ಇತರೆ ಪದವೀಧರರು, 18 ರಿಂದ 30 ವಯೋಮಾನದವರಾಗಿರಬೇಕು. ಬಯೋಡಾಟಾ 6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ತರಬೇಕು. ಮೇಳದಲ್ಲಿ ಭಾಗವಹಿಸುವ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ.ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment