ಮನೆ ಕಟ್ಟಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Written by Ramlinganna

Published on:

Pradhan mantri avas yojana : ನಿವೇಶನರಹಿತರಿಗೆ ನಿವೇಶನ ನೀಡಲು ಹಾಗೂ ಮನೆ ಕಟ್ಟಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಎಲ್ಲಿ ಸಲ್ಲಿಸಬೇಕು ಯಾವ ಯಾವ ದಾಖಲೆ ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ ಮತ್ತು ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ರಾಜೀವಗಾಂದಿ ವಸತಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ ಹೊರಡಿಸಿರುವ ಸೂಚನೆಯಂತೆ ಭಾರತ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿರುವ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳು ನಿಗಮದ ಆನ್ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ ಅದರ ಸ್ವೀಕೃತಿ ಪತ್ರದೊಂದಿಗೆ ಅಗತ್ಯ ದಾಖಲಾತಿ ಸಂಬಂಧಿತ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಱ್ಜಿ ಸಲ್ಲಿಸಲು ಕುಟುಂಬದ ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ , ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲ ಎಂಬುದಕ್ಕೆ ನ್ಯಾಯಾಲಯದ ಅಫಿಡವಿಟ್, ಬಾಡಿಗೆ ಮನೆಯಲ್ಲಿ ವಾಸವಾಗಿರುವುದನ್ನು ದೃಢೀಕರಿಸುವ ವಿದ್ಯುತ್ ಬಿಲ್ ಹಾಗೂ ಇತ್ತೀಚಿನ ಭಾವಚಿತ್ರ ಸಲ್ಲಿಸಬೇಕು. ಅರ್ಹ ಫಲಾನುಭವಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು.

Pradhan mantri avas yojana  ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ

ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಅಲೆಮಾರಿ ಸಮುದಾಯದವರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿವೇಶನ ಹೊಂದಿರುವ ಬಗ್ಗೆ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಹಾಗೂ ಬ್ಯಾಂಕ್ ಪಾಸ್ಪುಕ್ ಪ್ರತಿಯೊಂದಿಗೆ ಅರ್ಜಿಯನ್ನು ಇದೇ ಜೂನ್ 8 ರೊಳಗಾಗಿ ಸಲ್ಲಿಸಬೇಕು. ಅರ್ಜಿದಾರರು ಅಥವಾ ಕುಟುಂಬದವರು ಈ ಹಿಂದೆ ಯಾವುದೇ ಯೋಜನೆಯಡಿ ವಸತಿ ಸೌಲಭ್ಯವನ್ನು ಪಡೆದಿಲ್ಲವೆಂದು ಗ್ರಾಮೀಣ ಭಾಗದವರು ಗ್ರಾಪಂನಿಂದ ಹಾಗೂ ನಗರ ಪ್ರದೇಶದವರು ಪಟ್ಟಣ ಪಂಚಾಯತ್, ನಗರಸಭೆ, ಪುರಸಭೆಯಿಂದ ದೃಢೀಕರಣ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ನಿವೇಶನ ರಹಿತರಿಂದ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿರಹಿತ ಹಾಗೂ ನಿವೇಶನರಹಿತ ಕುಟುಂಬಗಳಿಗೆ ವಸತಿ ಕಲ್ಪಿಸಲು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ (ಕಚ್ಚಾಮನೆ ಹೊಂದಿರುವ) ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 30 ರವರೆಗೆ ವಿಸ್ತರಿಸಿದೆ.

ಇದನ್ನೂ ಓದಿ ಫಸ್ಟ್ ಕ್ಲಾಸ್ ನಲ್ಲಿ ಪಾಸಾಗಿದ್ದರೆ 35 ಸಾವಿರ ರೂಪಾಯಿಯವರಿಗೆ ಪ್ರೋತ್ಸಾಹಧನ ಸಿಗಲಿದೆ

ನಿಗದಿತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಮಾಹಿತಿಗೆ ಪುರಸಭೆ ವಸತಿ ವಿಭಾಗದಲ್ಲಿ ಸಂಪರ್ಕಿಸಲು ಪುರಸಭೆ ಆಡಳಿತಾಧಿಕಾರಿ ಸಂತೋಷ ಜಗಲಾಸರ ಹಾಗೂ ಮುಖ್ಯಾಧಿಕಾರಿ ಎ ಎಚ್. ಮುಜಾವರ ಕೋರಿದ್ದಾರೆ.

 

Leave a Comment