2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ (pradhan mantri fasal bima yojana) ರೈತರು ವಿವಿಧ ಬೆಳೆಗಳಿಗೆ ವಿಮಾ (Crop insurance) ನೋಂದಣಿ ಮಾಡಿಕೊಳ್ಳಲು 2021ರ ಜುಲೈ 31 ಕೊನೆಯ ದಿನವಾಗಿದೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಅಲ್ಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘಾ ಸ್ಪೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದಲ್ಲಿ ರೈತರು ಬೆಳೆ ವಿಮೆಯ ಸದುಪಯೋಗ ಪಡೆಯಬಹುದು.

ಏನಿದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ? (What is pradhan mantri fasal bima yojana)

ಬೆಳೆ ನಷ್ಟ ಅಥವಾ ಬೆಳೆ ವಿಫಲವಾದಾಗ ನಷ್ಟ ಹೊಂದಿದ ರೈತರ ಕೈ ಹಿಡಿಯಲು ಸರಕಾರವು ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ಪರಿಚಯಿಸಿದೆ. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.

ಇದನ್ನೂ ಓದಿ: ನಿಮ್ಮ ಖಾತೆಗೆ ಫಸಲ್ ಭೀಮಾ ಯೋಜನೆ ಹಣ ಜಮಾ ಆಗಿದೆಯಾ ? ಇಲ್ಲಿ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಿ

ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.

ರೈತರು  ಬೆಳೆವಾರು ವಿಮಾ ಮೊತ್ತ ಹಾಗೂ ಉಳಿದ ಬೆಳೆಗಳ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ನೋಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *