Pradhanmantri jan Arogya scheme : ಆಯುಶ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ನೀಡಲಾಗುವುದು. ಈ ಯೋಜನೆ ಮೊದಲು ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಆದರೆ ಈಗ ಆರ್ಥಿಕ ಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಳ್ಳದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ
ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಯಾವುದೇ ಆದಾಯ ಮಿತಿ ಪರಿಗಣಿಸದೆ ಎಲ್ಲಾ ವೃದ್ಧರಿಗೂ ಆರೋಗ್ಯ ವಿಮೆ ಸೌಲಭ್ಯ ಸಿಗಲಿದೆ. ದೇಶವ್ಯಾಪಿ 6 ಕೋಟಿ ಹಿರಿಯ ನಾಗರಿಕರಿಗೆ ಕೇಂದ್ರದ ಉಚಿತ ಆರೋಗ್ಯ ವಿಮೆ ಸಿಗಲಿದೆ.
ಈವರೆಗೂ ಆಯುಶ್ಮಾನ್ ಭಾರತ್ ಕಾರ್ಡ್ ಪಡೆಯಲು ಅನುಸರಿಸಲಾಗುತ್ತಿದ್ದ ವಿಧಾನವೇ ಪರಿಷ್ಕೃತ ಯೋಜನೆಗೂ ಅನ್ವಯವಾಗಲಿದೆ. ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಗಳ್ನು ಹೊಂದಿದ್ದರೆ ಸಾಕು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
Pradhanmantri jan Arogya scheme ಅಡಿಯಲ್ಲಿ ನೋಂದಣಿ ಮಾಡಲು
https://pmjay.gov.in/
ಅಲ್ಲಿ ತೆರೆದುಕೊಳ್ಳುವ ಪೇಜ್ ನ ಬಲಭಾಗದಲ್ಲಿ Am I Eligible ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಬೇಕು.
ನಂತರ ಮೊಬೈಲ್ ನಂಬರ್ ನಮೂದಿಸಬೇಕು. ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ವೆರಿಫೈ ಮೇಲೆಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿಬರುತ್ತದೆ. ಮೊಬೈಲಿಗೆ ಬರುವ ಓಟಿಪಿ ದಾಖಲಿಸಬೇಕು. ಓಟಿಪಿ ನಮೂದಿಸಿದ ನಂತರ ಮತ್ತೆ ವೆರಿಫೈ ಮೇಲೆ ಕ್ಲಿಕ್ ಮಾಡಬೇಕು ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ . ತಾವು ಇರುವ ರಾಜ್ಯದ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಯೋಜನೆ ಆಯ್ಕೆ ಮಾಡಿಕೊಳ್ಳಬೇಕು. ಅಂದರೆ ಪಿಎಂಜೆಎನ್ಎಮ್ಎಎನ್ (ಪಿವಿಟಿಜಿ) ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ಆಯ್ಕೆ ಮಾಡಿಕೊಳ್ಳಬೇಕು.
ಇದನ್ನೂ ಓದಿ : ನಿಮ್ಮ ಸರ್ವೆ ನಂಬರಿನಲ್ಲಿ ಯಾರಿಗೆ ಎಷ್ಟು ಎಕರೆ ಜಮೀನಿದೆ?
ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು.ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ಹಾಕಿ ನಿಮ್ಮಹೆಸರು ನೋಂದಾಯಿಸಿಕೊಳ್ಳಬೇಕು. ಒಂದು ವೇಳೆ ನೀವು. ಆಯುಶ್ಮಾನ್ ಭಾರತ್ ಯೋಜನೆಗೆ ಈಗಾಗಲೇ ಕುಟುಂಬ ನೋಂದಾಯಿಸಿದ್ದರೆ ಅಲ್ಲಿ ಹೆಸರು ಕಾಣಿಸಲಿದೆ.
ಮೊಬೈಲ್ ನಲ್ಲಿಯೂ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಸಾಮಾನ್ಯ ಜನರು ತಮ್ಮ ಮೊಬೈಲ್ ನಲ್ಲಿ ಆನ್ಲೈನ್ ಮಾಡುವಾಗ ಯಾವುದೇ ಹಣ ಪಾವತಿಸಬೇಕಾಗಿಲ್ಲ. ಯಾರಿಗೂ ನೀವು ಹಣ ಕೊಡುವ ಅವಶ್ಯಕತೆಯಿಲ್ಲ. ಹಾಗಾಗಿ ಯಾವುದೇ ಆ್ಯಪ್ ಮೂಲಕ ನೋಂದಣಿ ಮಾಡುವಾಗ ಹಣ ನೀಡಬಾರದು.
ಗೂಗಲ್ ಪ್ಲೇ ಸ್ಟೋರ್‌ಗೆ ಹೋಗಿ ಆಯುಷ್ಮಾನ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಾನುಭವಿಯಾಗಿ ಲಾಗಿನ್ ಆದಾಗ captcha Enter ಮಾಡಿ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು, ದೃಢೀಕರಣ ಮಾಡಬೇಕು. ತದನಂತರ enroll senior citizens ಕ್ಲಿಕ್ ಮಾಡಬೇಕು. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಪ್ರಕಾರ, ಹೊಸದಾಗಿ ನೋಂದಾಯಿಸಲು ಆಧಾರ್ ಅಸ್ತಿತ್ವದಲ್ಲಿದ್ದೇಯೆ? ಎಂಬುದನ್ನು ಯಾರಾದರೂ ಪರೀಕ್ಷಿಸಿಕೊಳ್ಳಬಹುದು. e-KYC ಮಾಡಬೇಕು. ಪರಿಶೀಲನೆಗಾಗಿ ಮೊಬೈಲ್ ನಂಬರ್ ಮತ್ತು ಆಧಾರ್ OTP ಎಂಟರ್ ಮಾಡಬೇಕು. ಆಯುಷ್ಮಾನ್ ವಯ ವಂದನಾ ಕಾರ್ಡ್ ಡೌನ್ ಲೋಡ್ ಆದ ನಂತರ ಫೋಟೋ ಅಂಟಿಸಿ (capture) ಎಲ್ಲಾ ಹೆಚ್ಚುವರಿ ಮಾಹಿತಿ ಭರ್ತಿ ಮಾಡಬೇಕು. 70 ವರ್ಷಕ್ಕೂ ಮೇಲ್ಪಟ್ಟ ಎಲ್ಲಾ ಕುಟುಂಬ ಸದಸ್ಯರ ಹೆಸರನ್ನು ಸೇರಿಸಬೇಕು.
ಈ ಯೋಜನೆಗೆ ಅರ್ಜಿ ಸಲ್ಲಿಸುವವರು 70 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಕ್ಕಿಂತ ಹೆಚ್ಚಿರಬೇಕು
ಈ ಯೋಜನೆಯ ಅಡಿ ಬಡ ಕುಟುಂಬಗಳಿಗೆ ವರ್ಷಕ್ಕೆ 5 ಲಕ್ಷ ರೂಪಾಯಿಯವರೆಗೆ ವಿಮಾ ಸೌಲಭ್ಯ ಕಲ್ಪಿಸಲಾಗುತ್ತಿತ್ತು. ಅಂದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರದ ಚಿಕಿತ್ಸೆಗಳನ್ನು ಫಲಾನುಭವಿಗಳು ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಪಡೆಯಬಹುದಾಗಿತ್ತು.
ಪರಿ ಷ್ಕೃತ ಯೋಜನೆಯಲ್ಲಿ ಬಡ ಕುಟುಂಬಗಳಿಗೆ 5 ಲಕ್ಷ ರೂಪಾಯಿಯವರೆಗಿನ ವಿಮಾ ಸೌಲಭ್ಯ ಹಾಗೆಯೇ ಇರಲಿದೆ.ಹೆಚ್ಚುವರಿಯಾಗಿ ಆದಾಯದ ಇತಿ ಮಿತಿಗಳಿಲ್ಲದೆ 70 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲರಿಗೂ ವಾರ್ಷಿಕ 5 ಲಕ್ಷ ರೂಪಾಯಿಯವರೆಗೆ ವಿಮಾ ಸೌಲಭ್ಯ ಸಿಗಲಿದೆ.
ಫಲಾನುಭವಿಗಳು ತಮ್ಮ ತವರು ರಾಜ್ಯದಲ್ಲಿ ಮಾತ್ರವಲ್ಲದೆ ದೇಶದ ಯಾವುದೇ ಭಾಗದಲ್ಲಿಯೂ ಚಿಕಿತ್ಸೆ ಪಡೆಯಬಹುದು. 70 ವಯೋಮಾನದವರು ಹೊಸ ಯೋಜನೆಯ ಅಡಿಯಲ್ಲಿ ಹೊಸ ಆರೋಗ್ಯ ಕಾರ್ಡ್ ಪಡೆಯಲಿದ್ದಾರೆ.