Prize money application : ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸಾಗಿದ್ದರೆ 35 ಸಾವಿರ ರೂಪಾಯಿಯವರಿಗೆ ಪ್ರೋತ್ಸಾಹಧನ ಸಿಗಲಿದೆ. ಹೌದು, ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಎಂಜಿನೀಯರಿಂಗ್, ಮೆಡಿಕಲ್ ವೆಟರನರಿಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸಾಗಿದ್ದರೆ ನಿಮಗೆ 7 ಸಾವಿರ ರೂಪಾಯಿಯಿಂದ 35 ಸಾವಿರ ರೂಪಾಯಿಯವರೆಗೆ ಪ್ರೋತ್ಸಾಹ ಧನ ಸಿಗಲಿದೆ. ಯಾರು ಯಾರಿಗೆ ಪ್ರೋತ್ಸಾಹ ಧನ ಸಿಗಲಿದೆ. ಅರ್ಜಿ ಎಲ್ಲಿ ಸಲ್ಲಿಸಬೇಕು. ಇದಕ್ಕೆ ಬೇಕಾಗುವ ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿಗಳಲ್ಲಿ ಅಥವಾ ಮೆಟ್ರಿಕ್ ನಂತರದ ಇತರ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲೆಗಳನ್ನು ಸಂಬಂಧಪಟ್ಟ ಶಾಲೆ ಮುಖ್ಯಸ್ಥರಿಂದ ದೃಢೀಕರಿಸಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಶ್ರೇಣಿಯಲ್ಲಿ ಶೇ. 60 ರಿಂದ ಶೇ. 74.99 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದರೆ 15 ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮೆ ಮಾಡಲಾಗುವುದು.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ತಪ್ಪದೆ ಜೋಡಣೆ ಕಡ್ಡಾಯವಾಗಿದೆ.
ಪಿಯುಸಿ 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೋಮಾ ದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೆ 20 ಸಾವಿರ ರೂಪಾಯಿ ನೀಡಲಾಗುವುದು. ಅದೇ ರೀತಿ ಪದವಿ ಪೂರ್ವ ಕೋರ್ಸ್ ಕೋರ್ಸ್ (ಪದವಿ) ಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೆ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ಸ್ನಾತಕೋತ್ತರ ಪದವಿ (ಇಜಿ, ಎಂಎ, ಎಂಎಸ್ಸಿ) ನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ ಆ ವಿದ್ಯಾರ್ಥಿಗಳಿಗೆ 30 ಸಾವಿರ ರೂಪಾಯಿ ಹಾಗೂ ವೃತ್ತಿಪರ ಕೋರ್ಸ್ ಗಳಾದ ಅಗ್ರಿಕಲ್ಚರ್, ಎಂಜಿನಿಯರಿಂಗ್, ವೆಟನರಿ, ಮೆಡಿಸಿನ್ ಕೋರ್ಸ್ ಗಳಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೆ 35 ಸಾವಿರ ರೂಪಾಯಿಯವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.
ವಿದ್ಯಾರ್ಥಿಗಳು ತಮ್ಮ ಹತ್ತಿರದ ನೆಟ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಬಹುದು.
Prize money application ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ?
ನಿಮ್ಮ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಝರಾಕ್ಸ್ ಪ್ರತಿ ಹಾಗೂ ಆಧಾರ್ ಕಾರ್ಡ್ ಸಲ್ಲಿಸಿ ನೀವು ಅರ್ಜಿ ಸಲ್ಲಿಸಬಹುದು. ನಿಮ್ಮ ಎಸ್ಎಸ್ಎಲ್ಸಿ ನೋಂದಣಿ ಸಂಖ್ಯೆ ನಮೂದಿಸಲಾಗುವುದು. ಇದರೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಟ್ಯಾಚ್ ಮಾಡಲಾಗುವುದು. ಹಾಗಾಗಿ ಮೇಲಿನ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ಇದನ್ನೂ ಓದಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದ ಫಲಾನುಭವಿಗಳಿಗೆ ಹಣ ಬಿಡುಗಡೆ
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿಗೆ ಸಂಪರರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಸ್ಟಲ್, ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ
ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಡಾ.ಬಿ.ಆರ್. ಅಂಪೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶ ಹಾಗೂ ಪ್ರಥಮ ಯತ್ನದಲ್ಲೇ ಮತ್ತು ಪ್ರಥಮ ದರ್ಜೆಯಲ್ಲಿ ಪಾಸಾದ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾದ ವಿದ್ಯಾರಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್
https://swdservices.karnataka.gov.in/
ನಲ್ಲಿ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.





