PUC result 2020-21 ದ್ವಿತೀಯ PUC Result (ಜುಲೈ 20) ಮಂಗಳವಾರ ಸಾಯಂಕಾಲ 4 ಗಂಟೆಗೆ ಪ್ರಕಟವಾಗಲಿದೆ. ಕೊರೋನಾದಿಂದಾಗಿ ಈ ವರ್ಷ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲು ನಿರ್ಣಯಿಸಲಾಗಿದೆ.
ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ https://karresults.nic.in/ ವೆಬ್ ಸೈಟ್ ನಲ್ಲಿ ಸಾಯಂಕಾಲ 4 ರ ನಂತರ ಮೊಬೈಲ್ ನಲ್ಲಿಯೇ ವೀಕ್ಷಿಸಬಹುದು.
PUC result 2020-21 ಎಲ್ಲಿ ನೋಡಬೇಕು?
ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನಮೂದಿಸಬೇಕು. ಫಲಿತಾಂಶಕ್ಕಾಗಿ ಅಗತ್ಯವಾದ ನೋಂದಣಿ ಸಂಖ್ಯೆಯನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗಿದೆ. ಒಂದು ವೇಳೆ ನೋಂದಣಿ ಸಂಖ್ಯೆ ಸಿಗದಿದ್ದರೆ ವಿದ್ಯಾರ್ಥಿಗಳು http://pue.kar.nic.in ಈ ಲಿಂಕ್ ಮೇಲೆ ಕ್ಲಿಕ್ ಮಾಡಿ know my register number ಒತ್ತಿ ಕಲಿಯುತ್ತಿರುವ ಜಿಲ್ಲೆ, ಕಾಲೇಜು ಆಯ್ಕೆ ಮಾಡಿಕೊಂಡು ನೋಂದಣಿ ಸಂಖ್ಯೆ ಪಡೆಯಬಹುದು. ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ.
ಪ್ರಸಕ್ತ ವರ್ಷ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ಪಾಸ್ ಮಾಡಲಾಗಿದೆ. ಹೊಸ (ಪ್ರೇಷರ್ಸ್) ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಈ ಬಾರಿಯ ದ್ವಿತಿಯೀ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಆ ಮಕ್ಕಳ ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಆಧರಿಸಿ ದ್ವಿತಿಯೀ ಪಿಯುಸಿ ಫಲಿತಾಂಶ ಸಿದ್ದಪಡಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮೊಬೈಲ್ ನಲ್ಲೇ ನೋಡಿ
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇಂದು ತಮ್ಮ ರಿಸಲ್ಟ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಎಕ್ಸಾಮಿನೇಶನ್ ರಿಸಲ್ಟ್ -2023 ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಕರ್ನಾಟಕಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಹಾಗೂ ದ್ವಿತೀಯ ಪೀಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶಪ್ರಕಟಣೆ ಎಂಬ ಎರಡು ಆಯ್ಕೆಗಳು ಕಾಣಿಸುತ್ತವೆ.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಕೆಳಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ರೋಲ್ ನಂಬರ್ ಅಥವಾ (Registration Number) ಮತ್ತು ಜನ್ಮ ದಿನಾಂಕ ಬರೆಯಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹಾಗಾಗಿ ಎರಡು ದಿನ ಮೊದಲೇ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಚುನಾವಣೆಗೆ ಅಡ್ಡಿಯಾಗದಂತೆ ಮಕ್ಕಳಿಗೂ ತೊಂದರೆಯಾಗದಂತೆ ಫಲಿತಾಂಶ ಬಿಡುಗಡೆ ಮಾಡಲಾಗುತ್ತಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೀ ಉತ್ತರವನ್ನು ಬಿಡುಗಡೆ ಮಾಡಲಾಗಿತ್ತು. ಹೌದು, ಏಪ್ರೀಲ್ 17 ರಂದೇ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಕೀ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಅನಮತಿಸಲಾಗಿತ್ತು. ಈಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.