ಇಂದು ಪಿಯುಸಿ ರಿಸಲ್ಟ್ ಪ್ರಕಟ: ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

Written by Ramlinganna

Published on:

PUC result check : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಅಂದರೆ ಏಪ್ರೀಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮಾರ್ಚ್  1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು.

ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಠಿ ನಂತರ ಮಧ್ಯಾಹ್ನ 1 ಗಂಟೆಗೆ

https://kseab.karnataka.gov.in/

ಅಥವಾ

 https://karresults.nic.in/

ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

PUC result check ಪಿಯುಸಿ 2025 ರಿಸಲ್ಟ್ ಚೆಕ್ ಮಾಡುವುದು ಹೇಗೆ?

2025 ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ. ಫಲಿತಾಂಶ 2025 ಅನ್ನು ಪರಿಶೀಲಿಸಲು ಕೆಲವು ಸರಳ ಹಂತಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಇಲ್ಲಿ ಕೆಳಗೆ ನೀಡಲಾದ ಮಾಹಿತಿಯಂತೆ ಚೆಕ್ ಮಾಡಬಹುದು.

ಇಂದು ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಸ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ  ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ಇದನ್ನೂ ಓದಿ ನಿಮ್ಮ ಜಮೀನಿನ ಅಳತೆ ಮೊಬೈಲ್ ನಲ್ಲಿ ಹೀಗೆ ಮಾಡಿ

ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ವ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್​ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ.

ಫಲಿತಾಂಶ ಚೆಕ್‌ ಮಾಡೋದು ಹೇಗೆ?

ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಹೋಗಿ: karresults.nic.in
ಹಂತ 2: ಮುಖಪುಟದಲ್ಲಿ ಲಭ್ಯವಿರುವ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2025 ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ಸ್ಟ್ರೀಮ್ ಆಯ್ಕೆಮಾಡಿ ಮತ್ತು ನೋಂದಣಿ ಸಂಖ್ಯೆಯನ್ನು ಟೈಪ್‌ ಮಾಡಿ
ಹಂತ 4: ಕರ್ನಾಟಕ 2 ನೇ ಪಿಯುಸಿ ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ
ಹಂತ 5: ಸ್ಕೋರ್‌ಕಾರ್ಡ್ ಪಿಡಿಎಫ್ ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ

Leave a Comment