PUC Result check here : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್ , ಮೊಬೈಲ್ ಯಾಪ್ ನಲ್ಲಿಯೂ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
PUC Result check here ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು
https://karresults.nic.in
ವೆಬ್ಸೈಟ್ ಮತ್ತು ಕರ್ನಾಟಕ ಒನ್, ಮೊಬೈಲ್ ಯಾಪ್ ಮೂಲಕವೂ ಪಡೆಯಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವ್ಯಾಟ್ಸಪ್ ಎಸ್ಎಂಎಸ್ ಮೂಲಕ ಫಳಿತಾಂಶದ ಮಾಹಿತಿಯನನು ಮಂಡಳಿಯಿಂದ ರವಾನಿಸಲಾಗುವುದು.
ಡಿಜಿಲಾಕರ್ ಮೂಲಕ ಅಂಕ ಪಟ್ಟಿ ಡೌನ್ಲೋಡ್ ಹೀಗೆ ಮಾಡಿ
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಟಲಾಕರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ.
https://www.digilocker.gov.in
ಮೂಲಕ ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ
ಪಿಯುಸಿ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಹೌದು, ತಮ್ಮ ಅಂಕಪಟ್ಟಿಯನ್ನು ಯಾವ ರೀತಿ ಡೌನ್ಲೋಡ್ ಮಾಡಿಕೊಳ್ಳಬಹುದು ಎಂಬ ಮಾಹಿತಿಯನ್ನು
https://tinyurl.com/mw84wmh9
ಮೂಲಕ ತಿಳಿದುಕೊಳ್ಳಬಹುದು.





