Tractor purchase subsidy ಟ್ರ್ಯಾಕ್ಟರ್ ಖರೀದಿಗೆ ಶೇ. 50 ರವರೆಗೆ ಸಬ್ಸಿಡಿ ನೀಡಲಾಗುವುದು. ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಡಿಯಲ್ಲಿ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ ಸಿಗಲಿದೆ.
ರೈತರ ಆದಾಯ ದ್ವಿಗುಣಗೊಳಿಸುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ರೈತರಿಗಾಗಿ ಜಾರಿಗೆ ತಂದ ಯೋಜನೆಗಳು ಸರಿಯಾದ ಮಾಹಿತಿಯ ಕೊರತೆಯಿಂದಾಗಿ ರೈತರಿಗೆ ಸರ್ಕಾರದ ಲಾಭ ಸಿಗುತ್ತಿಲ್ಲ. ಕೃಷಿ ಯಾಂತ್ರೀಕರಣ ಯೋಜನೆಯಂತೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಡಿಯಲ್ಲಿಯೂ ಸಹ ರೈತರಿಗೆ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ ಸಿಗುತ್ತದೆ.
ಹೌದು, 20 ಹೆಚ್.ಪಿ. ಅಶ್ವಶಕ್ತಿ ಟ್ರ್ಯಾಕ್ಟರ್ ಖರೀದಿಗಾಗಿ ರೈತರಿಗೆ ಸಹಾಯಧನ ಸಿಗಲಿದೆ. ಈ ಯೋಜನೆಯಡಿ ರೈತರು ಎಷ್ಟು ಸಬ್ಸಿಡಿ ಪಡೆಯುತ್ತಾರೆ. ಯಾವ ಯಾವ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ನೀರಾವರಿ ಹೊಂದಿರುವ ಹಾಗೂ ತೋಟಗಾರಿಕೆ ಮಾಡಲಿಚ್ಚಿಸುವ ರೈತರಿಗೆ ವಿವಿಧ ಘಟಕಗಳ ನಿರ್ಮಾಣಕ್ಕೆ ಮತ್ತು ಟ್ರ್ಯಾಕ್ಟರ್ ಖರೀದಿಗಾಗಿ ಸಹಾಯಧನ ನೀಡಲಾಗುವುದು. ಇತ್ತೀಚೆಗೆ ಕೂಲಿಕಾರ್ಮಿಕರ ವೆಚ್ಚ ಹೆಚ್ಚಾಗುತ್ತಿದ್ದರಿಂದ ರೈತರ ಕೃಷಿ ಕೂಲಿಕಾರ್ಮಿಕರ ವೆಚ್ಚ ತಗ್ಗಿಸಲು ವಿವಿಧ ಘಟಕಗಳ ನಿರ್ಮಾಣಕ್ಕೆ ಹಾಗೂ ಟ್ರ್ಯಾಕ್ಟರ್ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ.
ಇದನ್ನೂ ಓದಿ : ಜಮೀನಿನ ತತ್ಕಾಲ್ ಪೋಡಿ, 11 ಇ ನಕ್ಷೆ ಹಾಗೂ ಭೂ ಪರಿವರ್ತನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಟ್ರ್ಯಾಕ್ಟರ್ ನೊಂದಿಗೆ ರೈತರು ಹಣ್ಣಿನ ಬೆಳೆಗಳಾದ ಬಾಳೆ, ದ್ರಾಕ್ಷಿ, ಡ್ರ್ಯಾಗನ್ ಫ್ರೂಟ್, ದಾಳಿಂಬೆ, ಮಾವು, ಸೇಬು, ಸಪೋಟಾ, ಸೀತಾಫಲ ಸೇರಿದಂತೆ ಇನ್ನಿತರ ಹಣ್ಣುಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುವುದು. ಇದರೊಂದಿಗೆ ಪಾಲಿಹೌಸ್ ನಿರ್ಮಾಣಕ್ಕೆ, ಅರಿಶಿಣ, ಈರುಳ್ಳಿ ಶೇಖರಣ ಘಟಕ ನಿರ್ಮಾಣಕ್ಕೂ ಸಹಾಯಧನ ಸಿಗಲಿದೆ.
Tractor purchase subsidy ಯಾವ ರೈತರಿಗೆ ಎಷ್ಟು ಸಹಾಯಧನ ಸಿಗಲಿದೆ?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ತೋಟಗಾರಿಕಾ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ. 40 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 50 ರಷ್ಟು ಪ್ರೋತ್ಸಾಹಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಯಾವ ದಾಖಲೆ ಬೇಕು?
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ರೈತರು ಸಹಾಯಧನ ಪಡೆಯಲು ಸ್ವಂತ ಜಮೀನಿ ಹೊಂದಿರಬೇಕು. ಆಧಾರ್ ಕಾರ್ಡ್ ಇರಬೇಕು. ಮೊಬೈಲ್ ನಂಬರ್, ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಫೋಟೋ ಇರಬೇಕು. ಫ್ರೂಟ್ಸ್ ಐಡಿ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ರೈತರು ಮೇಲಿನ ದಾಖಲೆಗಳೊಂದಿಗೆ ಅರ್ಜಿಸಲ್ಲಿಸಬೇಕು.ತೋಟಗಾರಿಕೆ ಇಲಾಖೆಯ ವತಿಯಿಂದ ಸಹಾಯಧನ ಪಡೆಯಲು ಮತ್ತೇನಾದರೂ ದಾಖಲೆ ಬೇಕಾದರೆ ಹತ್ತಿರದರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬೇಕು.
ರೈತರು ಎಲ್ಲಿ ಸಂಪರ್ಕಿಸಬೇಕು?
ರಾಜ್ಯದ ಪ್ರತಿಯೊಂದು ಹೋಬಳಿ ಕೇಂದ್ರದಲ್ಲಿ ಒಂದು ರೈತ ಸಂಪರ್ಕ ಕೇಂದ್ರವಿರುತ್ತದೆ. ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ಪಡೆಯಬಹುದು. ಅಥವಾ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಲಭ್ಯತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು.
ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಟ್ರ್ಯಾಕ್ಟರ್ ಪಡೆಯಲು ರೈತರು ಕೃಷಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅದೇ ರೀತಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಬೇಕಾದರೆ ರೈತರು ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.