ಕೃಷಿ ಚಟುವಟಿಕೆಗೆ ದಿನದಿಂದ ದಿನಕ್ಕೆ ಕಾರ್ಮಿಕರ ಕೊರತೆ ಉಂಟಾಗುತ್ತಿರುವುದರಿಂದ ಇಂದು ರೈತರು ಯಂತ್ರೋಪಕರಣಗಳಿಗೆ ಮೊರೆ ಹೋಗುತ್ತಿದ್ದಾರೆ. ರೈತರ ಅವಶ್ಯಕತೆಗನುಗುಣವಾಗಿ ಯಂತ್ರೋಪಕರಣಗಳ ಕಂಪನಿಗಳು ಆಧುನಿಕ ತಂತ್ರಜ್ಞಾನವುಳ್ಳ ಯಂತ್ರಪೋಕರಣಗಳನ್ನು ತಯಾರಿಸುತ್ತಿವೆ.
ಮಾರುಕಟ್ಟೆಗೆ ಬರುತ್ತಿರುವ ಕೃಷಿ ಯಂತ್ರೋಪಕರಣಗಳಿಗೂ ಇಂದು ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವು ಸಹ ರೈತರ ನೆರವುಗೆ ಬಂದು ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ನೀಡುತ್ತಿದೆ. ಹೌದು, ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಖರೀದಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ.
ಕೃಷಿ ಯಾಂತ್ರೀಕರಣ ಯೋಜನೆಯ ಉದ್ದೇಶ
ಕೃಷಿ ಯಾಂತ್ರೀಕರಣ ಯೋಜನೆಯನ್ನು ಉತ್ಪಾದನಾ ವೆಚ್ಚ ಕಡಿಮೆ ಮಾಡಿ ರೈತರ ಆದಾಯ ಹೆಚ್ಚಿಸುವುದಕ್ಕಾಗಿ ಜಾರಿಗೆ ತರಲಾಗಿದೆ. ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವು ಮಾಡುವುದು, ಉತ್ಪಾದಕತೆ ಹೆಚ್ಚಿಸುವುದು ಮತ್ತು ಕೃಷಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದೇ ಈ ಯೋಜನೆ ಉದ್ದೇಶವಾಗಿದೆ. ಕೃಷಿ ಇಲಾಖೆಯಲ್ಲಿ ಭೂಮಿ ಸಿದ್ದತೆಯಿಂದ ಕೊಯ್ಲುವರೆಗೆ ವಿವಿಧ ಕೃಷಿ ಯಂತ್ರೋಪಕರಣಗಳ ಖರೀದಿಗೆ ರೈತರಿಗೆ ಸಹಾಯಧನ ನೀಡಲಾಗುವುದು.
ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿಸೌಲಭ್ಯ ಪಡೆಯಲು ಆಸಕ್ತಿರುವ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ವಿಚಾರಿಸಬಹುದು. ರಾಜ್ಯದ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯತೆಯ ಆಧಾರದ ಮೇಲೆ ಹಿರಿತನದ ಆಧಾರದ ಮೇಲೆ ಯಂತ್ರೋಪಕರಣಗಳನ್ನು ವಿತರಿಸಲಾಗುವುದು.
ಯಾವ ಯಾವ ಕೃಷಿ ಯಂತ್ರೋಪಕರಣಗಳಿಗೆ ಸಿಗಲಿದೆ ಸಬ್ಸಿಡಿ
ಕೃಷಿ ಚಟುವಟಿಕೆಯಲ್ಲಿ ಉಳುಮೆಯಿಂದ ಕೊಯ್ಲುವರೆಗೆ ಬೇಕಾಗುವ ಎಲ್ಲಾ ಪ್ರಕಾರದ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೀಡಲಾಗುತ್ತಿದೆ. ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ರೈತ ಸಂಪರ್ಕ ಕೇಂದ್ರಗಳ ಮೂಲಕವೂ ರೈತರಿಗೆ ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ನೀಡಲಾಗುತ್ತಿದೆ.
ರೋಟಾವೇಟರ್, ಪವರ್ ಟಿಲ್ಲರ್, ಮಿನಿ ಟ್ರ್ಯಾಕ್ಟರ್, ಎಂ.ಬಿ ಪ್ಲೋ, ಡಿಸ್ಕ್ ಹ್ಯಾರೋ, ಡಿಸ್ಕ್ ಪ್ಲೋ ಸೇರಿದಂತೆ ಇನ್ನೂ ಹಲವಾರು ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೀಡಲಾಗುವುದು.
ಯಾವ ಯಾವ ದಾಖಲೆ ಬೇಕು?
ರೈತರು ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸರ್ಕಾರದಿಂದ ಸಬ್ಸಿಡಿ ಪಡೆಯಬೇಕಾದರೆ ಮೊದಲು ಆಧಾರ್ ಕಾರ್ಡ್ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಕುಟುಂಬದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಜಮೀನಿನ ಪಹಣಿಪತ್ರ ಇರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ರೈತರ ಹೆಸರಿನ ಮೇಲೆ ಜಮೀನು ಇರಬೇಕು. ರೈತರು ಕೆ ಕಿಸಾನ್ ನಲ್ಲಿ ನೋಂದಣಿ ಮಾಡಿಸಿರಬೇಕು. ಫ್ರೂಟ್ಸ್ ಐಡಿ ಹೊಂದಿರಬೇಕು.
ಈ ಯಂತ್ರೋಪಕರಣಗಳಿಗೆ ಇಷ್ಟು ಸಬ್ಸಿಡಿ
ಪವರ್ ಟಿಲ್ಲರ್ ಖರೀದಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಒಬ್ಬ ರೈತರಿಗೆ ಗರಿಷ್ಟ ಒಂದು ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
ಟ್ರ್ಯಾಕ್ಟರ್ ಚಾಲಿತ ಎಂ.ಬಿ. ಪ್ಲೋ ಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ಟ್ರ್ಯಾಕ್ಟರ್ ಚಾಲಿತ ಡಿಸ್ಕ್ ಪ್ಲೋ ಖರೀದಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಪಾಸ್ ಪೋರ್ಟ್ ಸೈಜಿನ ಇತ್ತೀಚಿನ ಭಾವಚಿತ್ರ ಇರಬೇಕು. ಸಾಮಾನ್ಯ ವರ್ಗದವರಿಗೆ 29 ಸಾವಿರದಿಂದ 36 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಅದೇ ರೀತಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 52 ಸಾವಿರದಿಂದ 65 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾರಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.