ಬೆಳೆ ವಿಮೆಗೆ ಅರ್ಜಿ ಆಹ್ವಾನ ಯಾವ ಬೆಳೆಗೆ ಎಷ್ಟು ಹಣ ಜಮೆ? ಇಲ್ಲಿದೆ ಮಾಹಿತಿ

Written by Ramlinganna

Published on:

Rabi Crop insurance application now : 2026-27ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ತಮ್ಮ ಹತ್ತಿರದ ಬ್ಯಾಂಕುಗಳು ಅಥವಾ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರಗಳ ಮೂಲಕವಿಮೆ ನೋಂದಾಯಿಸಿಕೊಳ್ಳಬಹುದು.

Rabi Crop insurance application now  ಯಾವ ಯಾವ ಬೆಳೆಗಳಿಗೆ ಯಾವ ದಿನಾಂಕದೊಳಗೆ ವಿಮೆ ಮಾಡಿಸಬಹುದು.

ರೈತರು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಲು ಜೊಳ (ಮಳೆಯಾಶ್ರಿತ) ನವೆಂಬರ್ 16 ಕೊನೆಯ ದಿನವಾಗಿದೆ. ಈರುಳ್ಳಿ (ನೀರಾವರಿ) ನವೆಂಬರ್ 30 ಕೊನೆಯ ದಿನವಾಗಿದೆ. ಮುಸುಕಿನ ಜೋಳ (ನೀರಾವರಿ) ಹಾಗೂ ಜೋಳಕ್ಕೆ ಡಿಸೆಂಬರ್ 15 ಕೊನೆಯ ದಿನವಾಗಿದೆ. ಕಡಲೆ (ನೀರಾವರಿ, ಮಳೆಯಾಶ್ರಿತ) ಡಿಸೆಂಬರ್ 31 ಕೊನೆಯ ದಿನವಾಗಿದೆ. ಭತ್ತ (ನೀರಾವರಿ) ನೆಲಕಡಲೆ ಶೇಂಗಾ (ನೀರಾವರಿ) ಹಾಗೂ ಈರುಳ್ಳಿ (ನೀರಾವರಿ) ಫೆಬ್ರವರಿ 26 ಕೊನೆಯ ದಿನವಾಗಿದೆ.

ಯಾವ ಬೆಳೆಗಳಿಗೆ ವಿಮೆ ವಿಮೆ ಮಾಡಸಬಹುದು ?

ನೀವು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Premium Calculator  ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ  ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಊರಿನ ವ್ಯಾಪ್ತಿಯಲ್ಲಿರುವ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಆಯ್ಕೆ ಕಾಣಿಸುತ್ತದೆ. ಅಲ್ಲಿ ನೀವು ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಎಷ್ಟು ಎಕರೆಗೆ ವಿಮೆ ಮಾಡಿಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Show Premium  ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಎಷ್ಟು ವಿಮೆ ಹಣ ಕಟ್ಟಬೇಕು ಬೆಳೆ ಸಂಪೂರ್ಣವಾಗಿ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ಕಾಣಿಸುತ್ತದೆ.

ಇದನ್ನೂ ಓದಿ : ಕೃಷಿ ಯಂತ್ರೋಪಕರಣ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಉದಾಹರಣೆಗೆ  ಜೋಳ ಒಂದು ಎಕರಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದರೆ ಒಂದು ಎಕರೆಗೆ ನೀವು 270 ರೂಪಾಯಿ ಪಾವತಿಸಬೇಕು. ಬೆಳೆ ಹಾನಿಯಾದರೆ ನಿಮಗೆ 18 ಸಾವಿರ ರೂಪಾಯಿಯವರೆಗೆ ವಿಮೆ ಹಣ ಜಮೆಯಾಗುತ್ತದೆ. ಹೆಕ್ಟೇರಿಗೆ 44 ಸಾವಿರ ರೂಪಾಯಿ ವಿಮೆ ಹಣ ಜಮೆಯಾಗುತ್ತದೆ. ಇದು ಬೆಳೆ ಯಾವ ಪ್ರಮಾಣದಲ್ಲಿ ಯಾವ ಹಂತದಲ್ಲಿ ಹಾನಿಯಾಗಿದೆ ಎಂಬುದರ ಮೇಲೆ ಅವಲಂಬಿಸಿದೆ.

ಬೆಳೆ ಸಾಲ ಪಡೆಯದ ರೈತರು, ತಾವು ಯಾವುದೇ ಬ್ಯಾಂಕಿನಲ್ಲಿ ಬೆಳೆ ಸಾಲ ಪಡೆದಿರುವುದಿಲ್ಲವೆಂದು ಸ್ವಯಂ ದೃಢೀಕರಣ ಪತ್ರವನ್ನು ವಿಮೆ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ

https://www.samrakshane.karnataka.gov.in/publichome.aspx

ಗೆ ಸಂಪರ್ಕಿಸಬಹುದು.

ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡಬೇಕು. ನಂತರ ವಿಮಾ ಕಂಪನಿಯ ಪ್ರತಿನಿಧಿ ತಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ ನಂತರ ನಿಮ್ಮ ಖಾತೆಗೆ ವಿಮೆ ಹಣ ಜಮೆಯಾಗುತ್ತದೆ.

Leave a Comment