ಹಿಂಗಾರು ಯಾವ ಬೆಳೆಗೆ ವಿಮೆ ಮಾಡಿಸಿದರೆ ಎಷ್ಟು ಜಮೆಯಾಗುತ್ತದೆ? ಇಲ್ಲಿದೆ ಮಾಹಿತಿ

Written by Ramlinganna

Published on:

Rabi crop insurance calculation:  ರೈತ ಬಾಂಧವರು ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಪ್ರಸಕ್ತ ಸಾಲಿನ ಹಿಂಗಾರು ಹಂಗಾಮು ಹಾಗೂ ಬೇಸಿಗೆ ಬೆಳಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು. ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಲು ಎಷ್ಟು ಹಣ ಪಾವತಿಸಿದರೆ ಎಷ್ಟು ಹಣ ಜಮೆಯಾಗಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ 2026-27ನೇ ಸಾಲಿನ ಬೆಳೆಯುವ ಬೆಳೆಗಳಾದ ಕಡಲೆ, ಜೋಳ, ಗೋಧಿ, ಕುಸುಬೆ, ಭತ್ತ ಹಾಗೂ ನೆಲಗಡಲೆ (ಶೇಂಗಾ) ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗಾಗಿ ರೈತರು ತಮ್ಮ ಹತ್ತಿರದ ಬ್ಯಾಂಕುಗಳಲ್ಲಿ, ಗ್ರಾಮ ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡಿಕೊಳ್ಳಬಹುದು.

ರಾಜ್ಯದಲ್ಲಿ ಈಗಾಗಲೇ ಹಿಂಗಾರು ಹಂಗಾಮಿನ ಬಿತ್ತನೆ ಕಾರ್ಯ ಸಾಗಿದ್ದು, ಬಿತ್ತನೆ ಪೂರ್ವದಿಂದ ಕೊಯ್ಲಿನ ನಂತರದವರೆಗೆ ಅನಿರೀಕ್ಷಿತ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ನಷ್ಟದಿಂದ ರೈತರನ್ನು ರಕ್ಷಿಸಲು ಮತ್ತು ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆಯಂತಹ ಪ್ರಕೃತಿ ವಿಕೋಪಗಳು ಹಾಗೂ ಯಾವುದೇ ಹಂತದಲ್ಲಿ ಬೆಳೆ ನಾಶವಾಗಬಹುದು. ಆದ್ದರಿಂದ ರೈತರು ಬಿತ್ತನೆ ಕಾರ್ಯ ಕೈಗೊಳ್ಳುವುದಷ್ಟೇ  ಅಲ್ಲದೆ, ಬಿತ್ತದ ಬೆಳೆ ಕ್ಷೇತ್ರವನ್ನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ನೋಂದಾಯಿಸುವುದು ಸಹ ಪ್ರಮುಖವಾಗಿದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

Rabi crop insurance calculation ನೀವು ಯಾವ ಯಾವ ಬೆಳೆಗಳಿಗೆ ವಿಮೆ ವಿಮೆ ಮಾಡಸಬಹುದು ?

ನೀವು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Premium Calculator  ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ  ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಊರಿನ ವ್ಯಾಪ್ತಿಯಲ್ಲಿರುವ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಆಯ್ಕೆ ಕಾಣಿಸುತ್ತದೆ. ಅಲ್ಲಿ ನೀವು ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಎಷ್ಟು ಎಕರೆಗೆ ವಿಮೆ ಮಾಡಿಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Show Premium  ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಎಷ್ಟು ವಿಮೆ ಹಣ ಕಟ್ಟಬೇಕು ಬೆಳೆ ಸಂಪೂರ್ಣವಾಗಿ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ಕಾಣಿಸುತ್ತದೆ.

ಇದನ್ನೂ ಓದಿ : ಬರ ಪರಿಹಾರ ಮೊದಲ ಕಂತಿನ 2500 ರೂಪಾಯಿ ಹಣ ಈ ಜಿಲ್ಲೆಯ ರೈತರ ಖಾತೆಗೆ ಜಮೆ

ಉದಾಹರಣೆಗೆ  ಜೋಳ ಒಂದು ಎಕರಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದರೆ ಒಂದು ಎಕರೆಗೆ ನೀವು 270 ರೂಪಾಯಿ ಪಾವತಿಸಬೇಕು. ಬೆಳೆ ಹಾನಿಯಾದರೆ ನಿಮಗೆ 18 ಸಾವಿರ ರೂಪಾಯಿಯವರೆಗೆ ವಿಮೆ ಹಣ ಜಮೆಯಾಗುತ್ತದೆ. ಹೆಕ್ಟೇರಿಗೆ 44 ಸಾವಿರ ರೂಪಾಯಿ ವಿಮೆ ಹಣ ಜಮೆಯಾಗುತ್ತದೆ. ಇದು ಬೆಳೆ ಯಾವ ಪ್ರಮಾಣದಲ್ಲಿ ಯಾವ ಹಂತದಲ್ಲಿ ಹಾನಿಯಾಗಿದೆ ಎಂಬುದರ ಮೇಲೆ ಅವಲಂಬಿಸಿದೆ. ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡಬೇಕು. ನಂತರ ವಿಮಾ ಕಂಪನಿಯ ಪ್ರತಿನಿಧಿ ತಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ ನಂತರ ನಿಮ್ಮ ಖಾತೆಗೆ ವಿಮೆ ಹಣ ಜಮೆಯಾಗುತ್ತದೆ.

Leave a Comment