Rain alert 6 days : ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಬಿಸಿಲಿನಲ್ಲಿ ಬೆಂಡಾಗಿದ್ದ ಜನರಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಕೆಲವು ಜಿಲ್ಲೆಗಳಲ್ಲಿ ಅಸ್ಟೊಂದು ಭಾರಿ ಮಳೆಯಾಗದಿದ್ದರೂ ಗುಡುಗು ಸಿಡಿಲಿನ ಆರ್ಭಟವಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಸುರಿಯುತ್ತಿರುವ ಸಾಧಾರಣ ಮಳೆಯಿಂದಾಗಿ ತಂಪಾದ ಗಾಳಿ ಬೀಸುತ್ತಿದೆ.
ಕರ್ನಾಟಕದ ವಿವಿಧ ಜಿಲ್ಲೆಗಲ್ಲಿ ಏಪ್ರೀಲ್ 17 ರವರೆಗೂ ಗುಡುಗು ಸಿಡಿಲನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವ ದಿನಾಂಕದಂದು ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
Rain alert 6 days ಯಾವ ಯಾವ ದಿನಾಂಕದಂದು ಮಳೆಯಾಗಲಿದೆ?
ಏಪ್ರೀಲ್ 11 ರಂದು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಏಪ್ರಿಲ್ 12ರಂದು, ಉಡುಪಿ ಮತ್ತು ದಕ್ಷಿಣ ಕನ್ನಡ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳ ಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 13 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಧಾರವಾಡ, ಗದಗ, ಕೊಪ್ಪಳ ಮತ್ತು ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದಲ್ಲಿ ಯಾರಿಗೆ ಎಷ್ಟು ಜಮೀನಿದೆ?
ಏಪ್ರಿಲ್ 14 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 15 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಧಾರವಾಡ, ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಹಾವೇರಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏ.16ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾವೇರಿ, ಜಿಲ್ಲೆಗಳ ಒಂದೆರಡುಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.
ಏಪ್ರಿಲ್ 17 ರಂದು , ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿಯಲು ಇಲ್ಲಿ ನೀಡಲಾದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು.
ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮತ್ತು ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ. ಇದ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಹಾಗಾಗಿ ರೈತರು ತಮ್ಮ ಮೊಬೈಲ್ ನಿಂದ ಮನೆಯಿಂದಲೇ ಕುಳಿತು ಕರೆ ಮಾಡಿ ಮಳೆ ಹಾಗೂ ಹವಾಮಾನ ಇಲಾಖೆಯ ಮಾಹಿತಿಯನ್ನ ಪಡೆದುಕೊಳ್ಳಬಹುದು.