ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕಳೆದ 10 ದಿನಗಳಿಂದ ಚುರುಕುಗೊಂಡ ಮಳೆ ಮತ್ತೆರಡು ದಿನ ಮುಂದುವರೆಯಲಿದೆ. ಅಕ್ಟೋಬರ್ 16 ಮತ್ತು 17 ರಂದು ಎರಡು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಧಾರಾಕಾ ಮಳೆಯಾಗುವ ಸಾಧ್ಯತೆಯಿರುವುದರಿಂದ ಎರಡು ದಿನಗಳ ಕಾಲ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಉತ್ತರಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ರಾಮನಗರ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಯಾವುದೇ ಮುನ್ಸೂಚನೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪಾಂಡಿಚೇರಿ, ಒಡಿಸ್ಸಾ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿಯೂ ಅಕ್ಟೋಬರ್ 16 ರಂದು ಮಳೆಯಾಗುವ ಸಾಧ್ಯತೆಯಿದೆ.
Read this: ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹಿಮಾಚಲ ಪ್ರದೇಶ ಮತ್ತು ಉತ್ತರಖಂಡ ಮತ್ತು ಉತ್ತರ ಪ್ರದೇಶದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಸ್ಸಾದಲ್ಲಿಯೂ ಮಳೆಯಾಗುವ ಸಾಧ್ಯತೆಯಿರುವುದರಿಂದ ಬಂಗಾಳ ಮಧ್ಯ, ಉತ್ತರ ಕೊಲ್ಲಿಯಲ್ಲಿ ಮತ್ತು ಪಶ್ಚಿಮ ಬಂಗಾಳ ಕರಾವಳಿಯ ಉದ್ದಕ್ಕೂ ಗಂಟೆಗೆ 40-50 ಮೀಟರ್ ಗಾಳಿಯ ವೇಗ ಇರುವುದರಿಂದ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.