Rain alert in 25 district : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವದರಿಂದ ಏಪ್ರೀಲ್ 2 ರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಬೆಂಗಳೂರು ಸೇರಿದಂತೆ ಕರ್ನಾಟಕದ 25 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
Rain alert in 25 district ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಏಪ್ರೀಲ್ 2 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕನ್ನಡ, ಉಡುಪಿ, ಬೆಳಗಾವಿ, ಗದಗ, ಚಿಕ್ಕಮಗಳೂರು, ಧಾರವಾಡ, ಕೊಡಗು, ಹಾಸನ, ಕೋಲಾರ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕೋಲಾರ, ದಾವಣಗೆರೆ, ತುಮಕೂರು, ಶಿವಮೊಗ್ಗ, ವಿಜಯನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಒರಿಸ್ಸಾ ಕರಾವಳಿಯಲ್ಲಿವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ. ಏಪ್ರೀಲ್ 1 ರಂದು ದಕ್ಷಿಣ ಕನ್ನಡ, ಬೆಳಗಾವಿ ಹಾಗೂ ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಏಪ್ರೀಲ್ 3 ರಂದು ಗುಡುಗು ಸಹಿತ ಮಳೆಯಾಗಲಿದೆ. ಏಪ್ರೀಲ್ 4 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದ ರೈತರಿಗೆಷ್ಟು ಎಕರೆ ಜಮೀನಿದೆ? ಚೆಕ್ ಮಾಡಿ
ದೇಶಾದ್ಯಂತ ಅನೇಕ ಪ್ರದೇಶಗಲ್ಲಿ ಬಿಸಿಲಿನ ಧಗೆ ಮುಂದುವರೆದರೆ, ಇನ್ನೂ ಕೆಲವೂ ರಾಜ್ಯಗಳಲ್ಲಿ ಮಳೆಯಿಂದಾಗಿ ತಂಪು ವಾತಾವರಣ ಇರಲಿದೆ. ಪಾಶ್ಚಿಮಾತ್ಯ ವಾಯುಭಾರ ಕುಸಿತದಿಂದಾಗ ಅರುಣಾಚಲಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿನಂತರ ಸ್ಥಳಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್
ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.
ಗುಡುಗು ಸಿಡಿಲಿನ ಮಾಹಿತಿ ನೀಡಲು ಬಂದಿವ್ ಆ್ಯಪ್ ಗಳು
ಗುಡುಗು ಸಿಡಿಲು ಬೀಳುವ ಐದು, ಹತ್ತು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ನೀಡಲು ಸಿಡಿಲು ಹಾಗೂ ದಾಮಿನಿ ಆ್ಯಪ್ ಗಳು ಇವೆ.ಈ ಆ್ಯಪ್ ಗಳನ್ನು ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡು ಸಿಡಿಲು ಬಡಿಯುವ ಐದು ನಿಮಿಷ ಮೊದಲೇ ಮಾಹಿತಿ ಪಡೆಯಬಹುದು.