ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Written by Ramlinganna

Updated on:

Rain alert coastal area ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸುಚನೆ ನೀಡಿದೆ.

ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಜಿಲ್ಲೆಗೆ ಶುಕ್ರವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಅಕಾಲಿಕ ಮಳೆ ಕರಾವಳಿಯ ಬಹುತೇಕ ಕಡೆ ಸುರಿದಿದೆ. ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಒಂದೇ ವೇಗದಲ್ಲಿ ಮಳೆ ಸುರಿಯುತ್ತಲೇ ಇತ್ತು. ಗ್ರಾಮೀಣ ಭಾಗದಲ್ಲಿ ಗುಡುಗು, ಸಿಡಿಲಿನ ಜತೆ ಮಳೆಯಾಗಿತ್ತು. ಮುಂದಿನ ನಾಲ್ಕೈದು ದಿನಗಳ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain alert coastal area ಇನ್ನೂ ಎರಡು ದಿನ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆ ಪ್ರಕಾರ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಇದೇ ರೀತಿಯ ಮಳೆ ಸುರಿಯುವ ನಿರೀಕ್ಷೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಜನವರಿ 8ರ ಬಳಿಕ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಜಿಲ್ಲೆಯಲ್ಲೇ ಗರಿಷ್ಠ 54 ಮಿ.ಮೀ ಮಳೆಯಾಗಿದೆ.

ಅಕಾಲಿಕಮಳೆಯಿಂದ ಮಂಗಳೂರು ನಗರ, ಉಳ್ಳಾಲ ಸೇರಿದಂತೆ ನಗರ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ಅಡಚಣೆ ಉಂಟಾಯಿತು. ದಿಢೀರನೆ ಮಳೆ ಸುರಿದಿದ್ದರಿಂದ ಅನೇಕ ಸಾಮಾಜಿಕ, ಧಾರ್ಮಿಕ, ಶುಭ ಕಾರ್ಯಗಳಿಗೆ ಸಮಸ್ಯೆ ಉಂಟಾಯಿತು.

ಇದನ್ನೂ ಓದಿ PM kisan Helpline number ಗೆ ಕರೆ ಮಾಡಿ ಹಣ ಪಡೆಯಿರಿ

ಇದೀಗ ಜಿಲ್ಲಾದ್ಯಂತ ಅಡಕೆ ಒಣಗಿಸುವ ಸಮಯವಾಗಿದ್ದರಿಂದ ಅಡಕೆ ಬೆಳೆಗಾರರನ್ನು ಮಳೆ ತೀವ್ರ ಸಂಕಷ್ಟಕ್ಕೆ ದೂಡಿದೆ.ಇನ್ನೂ ತರಕಾರಿ ಹೂಗಳು ಮಳೆಗೆ ಹಾಳಾಗುವುದರಿಂದ ರೈತರು ಬವಣೆ ಪಡವಂತಾಗಿದೆ.

ಉಡುಪಿಯಲ್ಲಿ ಉತ್ತಮ ಮಳೆ

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಮಾಮ ಗುರುವಾರ ಮುಂಜಾನೆ ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಮುಂಜಾನೆ ವರೆಗೆ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 15.60 ಮಿ.ಮೀ ಮಳೆಯಾಗಿದೆ

ಹವಾಮಾನ ಇಲಾಖೆಯ ಪ್ರಕಾರ ಶುಕ್ರವಾರ ಕರಾವಳಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಹಾಗಾಗಿ ಕರಾವಳಿಯಲ್ಲಿು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಅಕಾಲಿಕ ಮಳೆಯಿಂದ ವಿಶೇಷವಾಗಿ ಅಡಕೆ ಬೆಳೆಗಾರರಿಗೆ ನಷ್ಟವಾಗಿದೆ. ಒಣಗಲು ಹಾಕಿದ್ದ ಅಡಕೆ, ಕರಿಮೆಣಸು, ಧಾನ್ಯಗಳು ಮಳೆಯಿಂದ ನೆನೆದಿದ್ದು, ಹಾಳಾಗುವ ಸಾಧ್ಯತೆಯಿದೆ.

ನಿಮ್ಮ ಜಿಲ್ಲೆಯಲ್ಲಿ ಇಂದು ಮಳೆಯಾಗುವುದೇ?

ನಿಮ್ಮೂರಿನಲ್ಲಿ ಇಂದು ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ವರಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ ಮಳೆಯ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹವಾಮಾನ ವರದಿಯನ್ನು ಪಡೆಯಬಹುದು.

Leave a Comment