Rain alert in different place : ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Rain alert in different place : ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಕೆಲವೆಡೆ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಯಾದಗಿರಿ, ಕಲಬುರಗಿ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ :ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆಯಾಗಿದೆ? ಇಲ್ಲೇ ಚೆಕ್ ಮಾಡಿ
ಬಾಗಲಕೋಟೆ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲಗಳಾ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
Heavy two days rain alert ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಹಾವೇರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಹಾಗೂ ರಾಯಚೂರು ಜಿಲ್ಲೆಗಳ ಕೆಲವಡೆ ಸಾಧಾರಣ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ : ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.
ಕರಾವಳಿಯ ಎಲ್ಲ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಮ್ಮ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆಯಾಗಲಿದೆ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ಬೇಕೆ?
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





