ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್ 20 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಮಾರ್ಚ್ 21 ರಂದು ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕೊಪ್ಪಳ, ರಾಯಚೂರು, ಕಲಬುರಗಿ, ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಶನಿವಾರ ರಾಜ್ಯದ ವಿವಿಧೆಡೆ ಸುರಿಯಿತು ಮಳೆ

ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ರಾಯಚೂರು, ಕೊಪ್ಪಳ, ಚಾರಮರಾಜನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ.  ಮಳೆಯಿಂದಾಗಿರಾಜ್ಯದ ಹಾವೇರಿ ಜಿಲ್ಲೆಯ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.

ಮುಂಗಾರು ಪೂರ್ವ ಮಳೆಯ ಅಬ್ಬರದಲ್ಲಿ ಸಿಡಿಲಿಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಓರ್ವ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಲ ಗ್ರಾಮದ ಓರ್ವ ಹಾಗೂ  ಹಾಗೂ ಮಂಡ್ಯ ಜಿಲ್ಲೆಯ ಓರ್ವ  ಭಾರಿ ಮಳೆಗಾಳಿಗೆ  ಮೃತಪಟ್ಟಿದ್ದಾರೆ.

ಇದನ್ನೂ ಓದಿ ರೈತರಿಗೆ ಬೆಳೆ ವಿಮೆಯ ಸ್ಟೇಟಸ್, ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕೆಂಬ ಮಾಹಿತಿ ನೋಡಬೇಕೆ? ಇಲ್ಲಿದೆ ಮಾಹಿತಿ

ಗುಡುಗು, ಗಾಳಿಯೊಂದಿಗೆ ರಾಯಚೂರಿನಲ್ಲಿ ಆರಂಭವಾದ ಮಳೆಯಲ್ಲಿ ಕೆಲಕಾಲ ಆಲಿಕಲ್ಲು ಸುರಿದಿವೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಬಾರಿ ಗಾಳಿಗೆ ಕೆಲವೆಡೆ ಮನೆ, ಅಂಗಡಿ ಮೇಲೆ ಹಾಕಲಾಗಿದ್ದ ಟಿನ್ ಹಾರಿಹೋಗಿವೆ.  ಮೈಸೂರು ನಗರ ಸೇರಿ ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಿಡಿಲು ಸಹಿತ ಆರ್ಭಟದ ಮಳೆಯಾಗಿದೆ.

ಚಾಮರಾಜನಗರಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಗಾಳಿಯ ರಭಸಕ್ಕೆ ಅಪಾರ ಪ್ರಮಾಣದ ರೈತರ ಬೆಳೆ ಹಾಳಾಗಿದೆ.ಬಾಳೆ, ಈರುಳ್ಳಿ, ಮುಸುಕಿನ ಜೋಳ ಕಬ್ಬು ಫಸಲು ಹಾಳಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸನಿ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಕರ್ನಾಟಕ, ತಮಿಳುನಾಡು, ಮತ್ತು ಆಂಧ್ರಪ್ರದೇಶದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಜಮೀನುಗಳ ಸರ್ವೆ ನಂಬರ್ ಸಹಿತ ಬಂಡಿದಾರಿ, ಹಳ್ಳಕೊಳ್ಳಗಳ ಮ್ಯಾಪ್ ಬೇಕೆ? ಇಲ್ಲಿದೆ ಮಾಹಿತಿ

Leave a Reply

Your email address will not be published. Required fields are marked *