ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 23 ರಿಂದ ಮುಂದಿನ ಮೂರು ದಿನ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೈಲ್ಮೈ ಸುಳಿಗಾಳಿಯ ಪರಿಣಾಮ ನವೆಂಬರ್ 23 ರಿಂದ ಮೂರು ದಿನಗಳ ಕಾಲ ಮಳೆಯಾಯಾಗುವ ಸಾಧ್ಯತೆಯಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಮೇಲೆ ಹೆಚ್ಚಾಗುವುದಿಲ್ಲ. ಆದರೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ತಮಿಳುನಾಡು, ಕರಾವಳಿ ಆಂಧ್ರಪ್ರದೇಶ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮೇಲ ಪರಿಣಾಮ ಬೀರಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗುಪ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನವೆಂಬರ್ 23 ರಿಂದ 25 ರವರೆಗೆ ಮಳಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನವೆಂಬರ್ 24 ಹಾಗೂ 25 ರಂದು ಮಳೆಯಾಗಲಿದೆ. ಅದೇ ರೀತಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ನವೆಂಬರ್ 25 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಕ್ಷೀಣಗೊಂಡ ಪರಿಣಾಮ ಅಕ್ಟೋಬರ್ 1 ರಿಂದ ನವೆಂಬರ್ 20 ರವರೆಗೆ ವಾಡಿಕೆಯಂತೆ 165 ಮಿ.ಮೀ ಮಳೆ ಆಗಬೇಕಿತ್ತು. ಆರೆ 99 ಮಿ.ಮೀ ಮಳೆ ಬಿದ್ದಿದೆ. ಶೇ. 40 ಕೊರತೆ ಉಂಟಾಗಿದೆ.
ವರುಣಮಿತ್ರ ನಂಬರಿಗೆ ಕರೆ ಮಾಡಿ ಮಳೆ ಮಾಹಿತಿ ಪಡೆಯಿರಿ
ವರುಣಮಿತ್ರ ನಂಬರ್ 9243345433 ಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.