rain alert next 24 hours : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾತಾವರಣದ ಪರಿಣಾಮದಿಂದಾಗಿ ಮುಂದಿನ ನಾಲ್ಕು ಗಂಟೆಗಳಲ್ಲಿ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಳೆಯ ಪ್ರಮಾಣ ಹೇಗಿರಲಿದೆ. ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿನೆಡೆಗೆ ಬೀಸುತ್ತಿದೆಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ. ಇದರೊಂದಿಗೆ ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಮಳೆಯ ಪ್ರಮಾಣ ಹೇಗಿರಲಿದೆ ಎಂಬುದರ ಸಂಪೂರ್ಣ ಮಾಹಿತಿ ಸಹ ಸಿಗಲಿದೆ.
rain alert next 24 hours : ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಒಂದೆರೆಡು ಕಡೆ ತುಸು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ವಿಜಯನಗರ, ತುಮಕೂರು,ಷ ಶಿವಮೊಗ್ಗ ಜಿಲ್ಲೆಗಳಲ್ಯೂ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 25 ರಿಂದ ಮಾರ್ಚ್ 1 ರವರೆಗೆ ಎಳ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ವಾತಾವರಣದಲ್ಲಿ ಬದಲಾವಣೆಯಾಗಿದೆ. ಮಧ್ಯಾಹ್ನ ಸುಡು ಬಿಸಿಲು ಆರಂಭವಾಗಿತ್ತು. ಈಗ ತಂಪಾದ ವಾತಾವರಣ ಬೀಸಲಿದೆ. ಕಲಬುರಗಿ ಜಿಲ್ಲೆಯಲ್ಲಿಯೂ ಸೋಮವಾರ ಗುಡುಗು ಮಿಂಚಿನೊಂದಿಗೆ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ. ಇದರಿಂದಾಗಿ ಜನ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.
rain alert next 24 hours : ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
rain alert next 24 hours : ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಇದನ್ನೂ ಓದಿ SSLC ಮಾದರಿ ಉತ್ತರ ಪತ್ರಿಕೆ ಬಿಡುಗಡೆ ಮೊಬೈಲ್ ನಲ್ಲಿ ಹೀಗೆ ಡೌನ್ಲೋಡ್ ಮಾಡಿ
ತಾಪಮಾನ ಪರಿಸ್ಥಿತಿಗಳು ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಕನಿಸ್ಟ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ.





