rain alert now : ಕಲಬುರಗಿ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾನುವಾರ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಫೆಬ್ರವರಿ 13 ರಂದು ಸಾಯಂಕಾಲದೊಳಗೆ ಗುಡುಗು ಸಿಡಿಲು ಜೊತೆ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿ ಭಾಗದ ಮಧ್ಯ ಭಾಗಗಳು, ಯಾಣಂ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯು ಚಂಡಮಾರುತ ಇರುವುದರಿಂದ ಕರ್ನಾಟದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ Old age Pension ಬಿಡುಗಡೆ- ನಿಮಗೆಷ್ಟು ಜಮೆಯಾಗಿದೆ? ಚೆಕ್ ಮಾಡಿ
rain alert now ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ದಕ್ಷಿಣಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಕೋಲಾರ, ಮಂಡ್ಯ ಕೊಡಗು, ಹಾಸನ, ಮತ್ತು ಶಿವಮೊಗ್ಗ, ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಏಪ್ರೀಲ್ 14, 15, 16 ಹಾಗೂ 17 ರಂದು ಸಹ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ ಯಾವ ದಿನಾಂಕದಂದು ಮಳೆಯಾಗಲಿದೆ?
ಏಪ್ರಿಲ್ 13 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಧಾರವಾಡ, ಗದಗ, ಕೊಪ್ಪಳ ಮತ್ತು ಬೀದರ್, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 14 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 15 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಧಾರವಾಡ, ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಹಾವೇರಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏ.16ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾವೇರಿ, ಜಿಲ್ಲೆಗಳ ಒಂದೆರಡುಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.
ಏಪ್ರಿಲ್ 17 ರಂದು , ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿಯಲು ಇಲ್ಲಿ ನೀಡಲಾದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಬಹುದು.
ವರುಣಮಿತ್ರ ಸಹಾಯವಾಣಿ ನಂಬರ್
ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮತ್ತು ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ. ಇದ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಹಾಗಾಗಿ ರೈತರು ತಮ್ಮ ಮೊಬೈಲ್ ನಿಂದ ಮನೆಯಿಂದಲೇ ಕುಳಿತು ಕರೆ ಮಾಡಿ ಮಳೆ ಹಾಗೂ ಹವಾಮಾನ ಇಲಾಖೆಯ ಮಾಹಿತಿಯನ್ನ ಪಡೆದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.