Rain alert rain alert : ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರೀಲ್ 14 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ, ಕನ್ನಡ, ದಕ್ಷಿಣ ಕನ್ನಡ, ವಿಜಯಪುರ, ಕಲಬುರಗಿ, ಹಾವೇರಿ, ಗದಗ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಬಾಗಲಕೋಟೆ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಏಪ್ರೀಲ್ 9 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ, ದಾವಣೆಗೆರೆ, ಚಿಕ್ಕಮಗಳೂರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಏಪ್ರೀಲ್ 10 ರಿಂದ 14 ರವರೆಗೆ ಯಾದಗಿರಿ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rain alert rain alert ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : LIC Status ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್
ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.
ಗುಡುಗು ಸಿಡಿಲಿನ ಮಾಹಿತಿ ನೀಡಲು ಬಂದಿವ್ ಆ್ಯಪ್ ಗಳು
ಗುಡುಗು ಸಿಡಿಲು ಬೀಳುವ ಐದು, ಹತ್ತು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ನೀಡಲು ಸಿಡಿಲು ಹಾಗೂ ದಾಮಿನಿ ಆ್ಯಪ್ ಗಳು ಇವೆ.ಈ ಆ್ಯಪ್ ಗಳನ್ನು ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡು ಸಿಡಿಲು ಬಡಿಯುವ ಐದು ನಿಮಿಷ ಮೊದಲೇ ಮಾಹಿತಿ ಪಡೆಯಬಹುದು.