ಈ ಜಿಲ್ಲೆಗಳಲ್ಲಿ ಮೂರು ದಿನಗಳ ಭಾರಿ ಮಳೆ ಸಾಧ್ಯತೆ

Written by Ramlinganna

Published on:

ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 5 ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 5 ರಿಂದ ದಕ್ಷಿಣ ಒಳನಾಡಿನ ಕೊಡಗಿನಲ್ಲಿ ಮಳೆಯಾಗಲಿದೆ. ನವೆಂಬರ್ 6 ರಿಂದ ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆಯಾಗಲಿದೆ. ನವೆಂಬರ್ 7 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆ ಯಾವಾಗ ಆಗುತ್ತದೆ ಎಂಬುದನ್ನು ತಿಳಿಯಲು ರೈತರು ವರುಣ ಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಬೇಕು. ಆಗ ನಿಮಗೆ ನಿಮ್ಮೂರಿನ ಸುತ್ತಮುತ್ತ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಈ ಒಂದು ಕರೆಯಿಂದ ನೀವು ಅಂದಿನ ಹವಾಮಾನ ವರದಿಯನ್ನು ಪಡೆಯಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಬೇಕೇ?

ರೈತರು ಐದು ದಿನ ಮೊದಲೇ ತಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ ಪ್ಸೇ ಸ್ಟೋರ್ ನಲ್ಲಿ Meghdoot ಎಂದು ಟೈಪ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ

https://play.google.com/store/apps/details?id=com.aas.meghdoot&hl=en_IN&gl=US

ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.

ನೀವು ಇಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬಹುದು. ನಂತರ ನೀವು ಯಾವ ಯಾವ ಮಾಹಿತಿಗಳನ್ನು ಚೆಕ್ ಮಾಡಬಹುದು ಎಂಬುದು ಕಾಣಿಸುತ್ತದೆ. ನಂತರ ಮುಂದೆ ಮೇಲೆ ಕ್ಲಿಕ್ ಮಾಡಿದ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕಾಗುತ್ತದೆ. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲ ಕ್ಲಿಕ್ ಮಾಡಬೇಕು.

ಇದನ್ನೂ ಓದಿ Pension ಪಿಂಚಣಿ ಪಡೆಯುವವರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಮೊಬೈಲ್ ನಲ್ಲಿ ಚೆಕ್ ಮಾಡಿ

ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತತ್ದೆ. ಅಲ್ಲೇ ಕಾಣುವ ಮುನ್ಸೂಚನೆ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಮುಂದಿನ ಐದು ದಿನಗಳ ಕಾಲ ಹವಾಮಾನದ ವರದಿ ಕಾಣಿಸುತ್ತದೆ.

ಈ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಈ ಮಾಹಿತಿ ಸಂಪೂರ್ಣ ಉಚಿತವಾಗಿರುತ್ತದೆ. ರೈತರು ಈ ಆ್ಯಪ್ ಸಹಾಯದಿಂದ ಹವಾಮಾನದ ಮಾಹಿತಿ ಪಡೆದು ತಮ್ಮ ಕೃಷಿ ಚಟುವಟಿಕೆಯನ್ನು ಮುಂದುವರಿಸಬಹುದು.

ಕಳೆದ ನಾಲ್ಕೈದು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ದಿನದಿಂದ ದಿನಕ್ಕೆ ನಿರಾಶೆಯುಂಟಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿಯೂ ಸಹ ಮೋಡ ಕವಿದ ವಾತಾವರಣ ಇದೆ. ಬಿಸಿಲಿನ ಝಳದಿಂದ ತತ್ತರಿಸುವ ಜನತೆಗೆ ಮಳೆ ನಿರೀಕ್ಷೆಯಿದೆ.

Leave a Comment