Rain alert tomarrow again : ಕರಾವಳಿ ಸೇರಿ ರಾಜ್ಯದ ಹಲವಾರು ಕಡೆ ಗುರುವಾರದಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುರವಾರು ಮತ್ತು ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Rain alert tomarrow again ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?
ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಆಗಸ್ಟ್ 8 ರವರೆಗೆ ನಿರಂತರ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಇದೇ 11 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಧಾರವಾಡ, ಗದಗ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯಲ್ಲಿಯೂ ಸಹ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಎರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 8 ರವರೆಗೆ ಗಂಟೆಗೆ 45 ರಿಂದ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಎಚ್ಚರವಹಿಸಬೇಕು ಎಂದು ಸೂಚಿಸಲಾಗಿದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ :ನಿಮ್ಮ ಜಮೀನಿನ ಅಕ್ಕಪಕ್ಕದ ರೈತರಿಗೆಷ್ಟು ಜಮೀನಿದೆ ? ಹೀಗೆ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





