ಹವಾಮಾನ ವೈಪರೀತ್ಯದ ಪರಿಣಾಮವಾಗಿ ಇನ್ನೆರೆಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ಈಗಾಗಲೇ ಕಳೆದೆರಡೂ ದಿನದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗಿ ಸಿಡಿಲು ಸಹಿತ ಮುಂಗಾರು ಪೂರ್ವ ಮಳೆ ಸುರಿಯುತ್ತಿದ್ದರಿಂದ ವಾತಾವರಣದಲ್ಲಿ ಬದಲಾವಣೆಯಾಗಿದೆ.
ರಾಜ್ಯದ ವಿವಿಧ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರೆದಿದ್ದು, ಇನ್ನೂ ಎರಡು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲ ಪ್ರಮಾಣ ಹೆಚ್ಚಾಗಿ ಹಾಗೂ ಸಮುದ್ರ ಮೈಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಮುಂದಿನ ಎರಡು ದಿನ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ ಯಾದಗಿರಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಅದೇ ರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ವಿಜಯನಗರ, ಮಂಡ್ಯ, ಹಾಸನ, ಶಿವಮೊಗ್ಗ, ಮೈಸೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಪಿಎಂ ಕಿಸಾನ್ 14ನೇ ಕಂತು ಯಾರಿಗೆ ಜಮೆಯಾಗುತ್ತದೆ ಯಾರಿಗೆ ಜಮೆಯಾಗಲ್ಲ? ಇಲ್ಲೇ ಚೆಕ್ ಮಾಡಿ
ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ಸುಳಿಗಾಳಿ ನಿರ್ಮಾಣವಾಗಿದೆ. ಎಲ್ಲೆಡೆ ತಾಪಾಮಾನ ಕಡಿಮೆಯಾಗಿ ತಣ್ಣನೆಯ ಗಾಳಿ ಬೀಸುತ್ತಿದೆ. ಅಕಾಲಿಕ ಹವಾಮಾನ ಬದಲಾವಣೆಯಿಂದಾಗಿ ಮಾರ್ಚ್ 17 ರಿಂದ ಮೂರು ದಿನಗಳ ಕಾಲ ಅಲ್ಲಲ್ಲಿ ಹಗುರವಾಗ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯಲ್ಲಿ ತುಂತುರು ಮಳೆ ಮುನ್ಸೂಚನೆ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಕಾಸರಗೋಡು ಭಾಗಗಳಲ್ಲಿ ಗುರುವಾರ ಮೋಡ ಕವಿದ ವಾತಾವರಣವಿದ್ದು, ಶುಕ್ರವಾರವೂ ಮುಂದುವರೆಯಲಿದೆ. ಆಗುಂಬೆ, ಚಾರ್ಮಾಡಿ, ನಾರಾವಿ, ಬೆಳ್ತಂಗಡಿ, ಸುಳ್ಯ, ಸುಬ್ರಹ್ಮಣ್ಯ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ನೀಡಲಾಗಿದೆ.
ನಿಮ್ಮೂರಿನಲ್ಲಿ ಮಳೆಯಾಗಲಿದೆಯೇ? ಈ ನಂಬರಿಗೆ ಕರೆ ಮಾಡಿ
ರೈತರು ತಮ್ಮ ಬಳಿಯಿರುವ ಮೊಬೈಲ್ ನಿಂದಲೇ ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಇನ್ನೂ ಎಷ್ಟು ದಿನ ಮಳೆಯಾಗಲಿದೆ ಎಂಬ ಮಾಹಿತಿ ಪಡೆಯಬಹುದು.
ವರುಣಮಿತ್ರ ಸಹಾಯವಾಣಿ (Varunmitra Helpline Number)
ಹೌದು, ರೈತರು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿಯನ್ನು ಪಡೆಯಬಹುದು. ರೈತರು ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಿದರೆ ಸಾಕು, ಈ ಉಚಿತ ಸಹಾಯವಾಣಿಯ ಸಿಬ್ಬಂದಿ ನಿಮ್ಮ ಕರೆ ಸ್ವೀಕರಿಸಿ ನಿಮ್ಮೂರಿನಲ್ಲಿ ಮಳೆಯಾಗಲಿದೆಯೇ? ಯಾವಾಗ ಮಳೆಯಾಗಲಿದೆ ಎಂಬ ಮಾಹಿತಿ ನೀಡಲಿದ್ದಾರೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ : ರೈತರ ಜಮೀನಿಗೆ ಹೋಗುವ ಕಾಲಾದಾರಿ, ಬಂಡಿದಾರಿ ಹಳ್ಳಕೊಳ್ಳಗಳ, ಬೆಟ್ಟಗುಡ್ಡಗಳ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಮಳೆಯ ಮಾಹಿತಿಯೊಂದಿಗೆ ನಿಮ್ಮೂರಿನ ಸುತ್ತಮುತ್ತ ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿನೆಡೆಗೆ ಬೀಸುತ್ತಿದೆ. ಮಳೆ ಸಾಧಾರಣವಾಗಿದೆಯೋ ಅಥವಾ ರಭಸವಾಗಿದೆಯೋ? ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಒಂದೇ ನಿಮಿಷದಲ್ಲಿ ಪಡೆಯಬಹುದು.
ರೈತರು ತಮ್ಮ ಬಳಿ ವರುಣಮಿತ್ರ ಸಹಾಯವಾಣಿ ನಂಬರ್ ಸೇವ್ ಮಾಡಿಕೊಳ್ಳಬೇಕು. ಆಗಾಗ ಹವಾಮಾನದ ವರದಿ ಪಡೆಯಲು ಅನುಕೂಲವಾಗುತ್ತದೆ. ಮಳೆಯ ಮುನ್ಸೂಚನೆ ಕುರಿತು ಪತ್ರಿಕೆಗಳಲ್ಲಿ ನೀಡಲಾಗಿರುತ್ತದೆ.ಆದರೆ ಹಳ್ಳಿಗಳಲ್ಲಿ ಕೆಲವು ಪತ್ರಿಕೆಗಳು ತಲುಪದೆ ಇರುವುದರಿಂದ ಹವಾಮಾನದ ವರದಿ ಕೆಲವು ಸಲ ರೈತರಿಗೆ ತಲುಪುವುದಿಲ್ಲ. ಹಾಗಾಗಿ ರೈತರು ವರುಣಮಿತ್ರ ಸಹಾಯವಾಣಿ ನಂಬರ್ ಸೇವ್ ಮಾಡಿಕೊಂಡು ನಿಮ್ಮೂರಿನ ವಾತಾವರಣ, ಮಳೆಯ ಕುರಿತಂತೆ ಮಾಹಿತಿಗಳನ್ನು ಸುಲಭವಾಗಿ ಪಡೆಯಬಹುದು.