ಇಂದಿನಿಂದ ಜನವರಿ 10 ರವರೆಗೆ ಭಾರಿ ಮಳೆ ಸಾಧ್ಯತೆ

Written by Ramlinganna

Updated on:

Rain upto 10th January ಅರಬ್ಬಿ ಸಮುದ್ರದಲ್ಲಿ ಉಂಟಾಗಿರು ಹವಾಮಾನ ಬದಲಾವಣೆಯಿಂದ ರಾಜ್ಯದಲ್ಲಿ ಜನವರಿ 10 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಚಳಿಗಾಲದಲ್ಲಿಯೂ ಅಕಾಲಿಕ ಮಳೆ ಸುರಿಯುತ್ತಿದ್ದು, ಈ ಮಳೆ ಜನವರಿ 10 ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ ಅನ್ನಭಾಗ್ಯ ಸ್ಕೀಮ್ ಹಣ ಜಮೆ ಆಗದವರು ಜನವರಿ7 ರೊಳಗೆ ಈ ಕೆಲಸ ಮಾಡಿ

ಉತ್ತರ ಒಳನಾಡಿನ ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಕೊಪ್ಪಳ, ಬಾಗಲಕೋಟೆ ವಿಜಯಪುರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain upto 10th January ಶೃಂಗೇರಿಯಲ್ಲಿ ಭಾರಿ ಮಳೆ

ಶೃಂಗೇರಿ ತಾಲೂಕಿನ ಬಹುತೇಕ ಭಾಗದಲ್ಲಿ ಭಾನುವಾರ ಮಧ್ಯಾಹ್ನದ ನಂತರ ಅಕಾಲಿಕ ಮಳೆಯಾಗಿದೆ. ತೀವ್ರ ಮಳೆ ಸುರಿದ ಪರಿಣಾಮ ಒಣಗಿಸಲು ಹಾಕಿದ್ದ ಹಣ್ಣಡಕೆ ನೀರಿನಲ್ಲಿ ತೇಲಿ ಹೋಗಿದೆ. ಒಣಗಿಸಲು ಹಾಕಿದ್ದ ಕಾಫಿಗೂ ನೀರು ನುಗ್ಗಿ ಹಾನಿಯಾಗಿದೆ. ಪಟ್ಟಣದಲ್ಲಿ ಮಳೆಯಿಂದ ಸಂಚಾರ ವಿರಳವಾಗಿದ್ದು, ಪ್ರವಾಸಿಗರು ಪರದಾಡಿದರು. ಕೊಪ್ಪ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ಅಕಾಲಿಕ ಮಳೆಯಿಂದ ಆರೋಗ್ಯದ ಮೇಲೆ ಪರಿಣಾಮ

ಅರಬ್ಬಿಸಮುದ್ರದಲ್ಲಿ ಉಂಟಾಗಿರುವ ಬದಲಾವಣೆಗಳು ಕರ್ನಾಟಕದಲ್ಲಿ ಮಳೆ ಸುರಿಯುವಿಕೆಗೆ ಕಾರಣವಾಗಿದೆ.

ಇದನ್ನೂ ಓದಿ ಬರಗಾಲ ಪಟ್ಟಿಯಲ್ಲಿರುವ ಈ ತಾಲೂಕಿನ ರೈತರಿಗೆ ಪರಿಹಾರ ಹಣ ಜಮೆ

ಚಳಿಯ ಜೊತೆ ಮಳೆಯು ಸೇರಿ ವಾತಾವರಣವು ಭಿನ್ನವಾಗಿದೆ. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ತುಂತುರು ಮಳೆ

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ. ಇದರಿಂದಾಗಿ ವಾರದ ರಜೆಯ ಮಜಾ ಅನುಭವಿಸುವ ಜನತೆಗೆ ತುಂತುರು ಮಳೆ ತೊಂದರೆ ಉಂಟುಮಾಡಿದೆ. ಸೋಮವಾರವೂ ಸಹ ಬೆಳಗ್ಗೆಯಿಂದ ತುಂತುರು ಮಳೆಯೊಂದಿಗೆ ತಣ್ಣನೆಯ ಗಾಳಿ ಬೀಸುತ್ತಿದೆ.

ನಿಮ್ಮ ಜಿಲ್ಲೆಯಲ್ಲಿ ಯಾವಾಗ ಮಳೆಯಾಗಲಿದೆ?

ನಿಮ್ಮ ಜಿಲ್ಲೆಯಲ್ಲಿ ಯಾವಾಗ ಮಳೆಯಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.  ಈ ಉಚಿತ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ.

ರೈತರು ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಬಹುದು. ಕರೆ ಮಾಡಿದವರಿಿಿ ಸಂಪೂರ್ಣವಾಗಿ ಉಚಿತವಾಗಿ ಮಾಹಿತಿ ನೀಡಲಾಗುವುದು. ಹಾಗಾಗಿ ರೈತರು ಉಚಿತ ಸಹಾಯವಾಣಿಯ ಸಹಾಯ ಪಡೆಯಬಹುದು.

Leave a Comment