Rain likely to continue ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಮಿಂಚಿನ ಆರ್ಭಟದೊಂದಿಗೆ ಸೆಪ್ಟೆಂಬರ್ 2 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಅಬ್ಬರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬಿ ಸಮುದ್ರದ ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿರುವುದರಿಂದ ರಾಜ್ಯದ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ರಾಮನಗರ ಶಿವಮೊಗ್ಗಹ ಸೇರಿದಂತೆ ಬಹುತೇಕ ಎಲ್ಲಾ ಕಡೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆಯಿರುವುದರಿಂದ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೋಮವಾರದಿಂದ ಮಂಗಳವಾರದವರೆಗೆ ಕಲಬುರಗಿ, ಗದಗ, ಧಾರವಾಡ, ಹಾವೇರಿ, ಚಿತ್ರದುರ್ಗ, ತುಮಕೂರ, ಕೋಲಾರ, ಮೈಸೂರು, ಚಾಮರಾಜನಗರ, ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.ಅದೇ ರೀತಿ ಮಂಗಳವಾರದ ಬಳಿಕ ರಾಜ್ಯದ ಒಳನಾಡು ಮತ್ತು ಕರಾವಳಿಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Rain likely to continue ನಿಮ್ಮೂರಿನಲ್ಲಿ ಮಳೆಯಾಗುವ ಮಾಹಿತಿ ಬೇಕೆ?
ರೈತರು ಮನೆಯಲ್ಲಿಯೇ ಕುಳಿತು ತಮ್ಮೂರಿನಲ್ಲಿ ಮಳೆಯಾಗುತ್ತದೆಯೋ ಇಲ್ಲವೋ ಎಂಬುದನ್ನು ಒಂದು ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, ವರುಣಮಿತ್ರ ನಂಬರಿಗೆ ಕರೆ ಮಾಡಿದರೆ ಸಾಕು, ಕ್ಷಣಮಾತ್ರದಲ್ಲಿ ರೈತರು ಮಳೆಯ ಮಾಹಿತಿ ಪಡೆಯಬಹುದು.
ಇದನ್ನೂ ಓದಿ : ಪಿಎಂ ಕಿಸಾನ್ ರೈತರಿಗೆ ಈ ಮೆಸೆಜ್ ಬಂದರೆ ಮಾತ್ರ 12ನೇ ಕಂತಿನ ಹಣ ಜಮೆ-ಯಾವ ಮೆಸೆಜ್ ಬರಬೇಕು? ಇಲ್ಲಿದೆ ಮಾಹಿತಿ
ರೈತರು 92433 45433 ಗೆ ಕರೆ ಮಾಡಿದರೆ ಸಾಕು, ತಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ. ಮಳೆಯ ಪ್ರಮಾಣ ಎಷ್ಟಿರುತ್ತದೆ ಎಂಬ ಮಾಹಿತಿಗಳನ್ನು ಪಡೆಯಬಹುದು.
ರಾಜ್ಯದಲ್ಲಿ ಮುಂದಿನ ಐದು ದಿನ ಮಳೆಯ ಮಾಹಿತಿ ಪಡೆಯಲು ಮೇಘದೂತ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ
ರೈತರು ಮುಂದಿನ ಐದು ದಿನಗಳ ಕಾಲ ಮಳೆ ಸುರಿಯುವ ಕುರಿತು ಮಾಹಿತಿ ಪಡೆಯಲು ಮೇಘದೂತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು.ಈ ಆ್ಯಪ್ ಸಹಾಯದಿಂದ ರೈತರು ಮನೆಯಲ್ಲಿಯೇ ಕುಳಿತು ಮುಂದಿನ ಐದು ದಿನಗಳ ಕಾಲ ಮಳೆ ಹೇಗಿರುತ್ತದೆ ಎಂಬ ಮಾಹಿತಿಯನ್ನುಪಡೆದುಕೊಳ್ಳಬಹುದು.
ರಾಜ್ಯದಲ್ಲಿ ಕೆಲವು ದಿನಗಳವರೆಗೆ ಬಿಡುವು ನೀಡಿದ್ದ ಮಳೆ ಈಗ ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಕಳೆದ ತಿಂಗಳು ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ರೈತರ ಅಪಾರ ಬೆಳೆ ಹಾನಿಯಾಗಿತ್ತು. ಈಗ ಕೆಲವು ಜಿಲ್ಲೆಗಳಲ್ಲಿ ಹೆಸರು, ರಾಶಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದ ಬೆಳೆಯೂ ಕೈಗೆ ,ಸಿಗದೆ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.