Rain monsoon : ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ? ಯಾವ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ನೀಡಲಾಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಮುಂದಿನ 24 ಗಂಟೆಯಲ್ಲಿ ಕೊಡಗು, ಉಡುಪಿ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ಗದಗ, ಹಾವೇರಿ, ಧಾರವಾಡ, ಮೈಸೂರು, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಆಗಸ್ಟ್ 16 ರಂದು ಚಿಕ್ಕಮಗಳೂರು,ಹಾಸನ, ಕೊಡಗು ಜಿಲ್ಲೆಗಳಿಗೆ ಆರೇಂಜ್ ಅಲರ್ಚ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡಪಿ, ಹಾವೇರಿ,ಮಂಡ್ಯ, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 17 ಮತತ್ು 18 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಹಾಸನ, ಮಂಡ್ಯ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಮೈಸೂರು, ಹಾಗೂ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ತೀರದಲ್ಲಿ ಬಿರುಗಾಳಿಯು 35 ರಿಂದ 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
Rain monsoon ಭಾರಿ ಮಳೆಯ ಆರೇಂಜ್ ಹಾಗೂ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ, ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು,ಈಜಾಡುವುದು, ದನ ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ Mobileನಲ್ಲಿ ಜಮೀನಿನ ಅಳತೆ ಮಾಡಿ – ಇಲ್ಲಿದೆ ಮಾಹಿತಿ
ನದಿ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಫಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು.ಭಾರಿ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳಿಗೆ ತಿಳಿಸಿದ್ದಾರೆ.
ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿದು ಸಾವು, ನೋವುಗಳು ಸಂಭವಿಸುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿರುವಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯ, ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳು ನೀಡುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದುತಿ ತಿಳಿಸಿದ್ದಾರೆ.
Rain monsoon ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ನಿಮಗೆ ಹವಾಮಾನ ವರದಿ ಕಾಣಿಸುತ್ತದೆ.