ನಾಳೆ ಈ ಆರು ಜಿಲ್ಲೆಗಳಲ್ಲಿ ಮಳೆಯಾಗಲಿದೆ- ಇಲ್ಲಿದೆ ಮಾಹಿತಿ

Written by Ramlinganna

Updated on:

Rain on February 24 : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಫೆಬ್ರವರಿ 24 ರಂದು ಸೋಮವಾರ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಮಳೆ ಮಾಹಿತಿ ಪಡೆಯಿರಿ

ಹೌದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ರಾಜ್ಯದ ಉಳಿದೆಡೆ ಒಣ ಹವೆ ಇರಲಿದೆ.

Rain on February 24 ಬಿಸಿಲು ಒಂದೆರಡು ಡಿಗ್ರಿ ಹೆಚ್ಚಳ

 ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌, ದಕ್ಷಿಣ ಒಳನಾಡಿನಲ್ಲಿ 1-2 ಡಿಗ್ರಿ ಸೆಲ್ಸಿಯಸ್‌ ಮತ್ತು ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯಕ್ಕಿಂತ ಒಂದೆರಡು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

8 ಜಿಲ್ಲೆಗಳಿಗೆ ಭಾರಿ ಬಿಸಿಲು

ಕಾರವಾರ, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಬಿಸಿಲಿನ ತಾಪಮಾನ ಹೆಚ್ಚಿರಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ 4 ದಿನಗಳು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಕೆಲವೆಡೆ ಮುಂಜಾವಿನಲ್ಲಿ ದಟ್ಟ ಮಂಜು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್‌ ಮತ್ತು 18 ಡಿಗ್ರಿ ಸೆಲ್ಸಿಯಸ್‌ ಇರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೇಸಿಗೆ ಬೇಗೆ

ಫೆಬ್ರವರಿ ಅಂತ್ಯಕ್ಕೆ ಬೇಸಿಗೆ ಬೇಗೆ ಎಲ್ಲರನ್ನೂ ಬಾಧಿಸುತ್ತಿದೆ. ಉಷ್ಣಾಂಶ 35 ಡಿಗ್ರಿ ದಾಟುತ್ತಿರುವುದರಿಂದ ಸೂರ್ಯ ಪ್ರತಾಪಕ್ಕೆ ವೃದ್ದರು, ಮಕ್ಕಳು, ಗರ್ಭಿಣಿಯರು ಹೈರಾಣಾಗುತ್ತಿದ್ದು, ಮುಂಬರುವ ಬೇಸಿಗೆ ಹೇಗೆ ಎದುರಿಸಬೇಕೆಂಬ ಚಿಂತೆ ಜನರನ್ನು ಬಾಧಿಸುತ್ತಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಸರ್ವೆ ನಂಬರ್ ಮ್ಯಾಪ್ ಹೀಗೆ ಡೌನ್ಲೋಡ್ ಮಾಡಿ

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆ ಕಾಟವಿದೆ.

ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ                                                                

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment