rain rain red alert : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸುವ ಸಾಧ್ಯತೆಯಿರುವುದರಿಂದ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಯಾವ ಯಾವ ದಿನ ಎಲ್ಲೆಲ್ಲೆ ಎಷ್ಟೆಷ್ಟು ಮಳೆಯಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.
ಆಗಸ್ಟ್ 19 ಮತ್ತು 20 ರಂದು ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಆಗಸ್ಟ್ 21 ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ತಿಂಗಳ ಕೊನೆಯ ವಾರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರಿನಲ್ಲಿ 5 ದಿನ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಇಲ್ಲೇ ಚೆಕ್ ಮಾಡಿ
ರಾಜ್ಯದ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಎರಡು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಎರಡೂ ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಇದ್ದು, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಇನ್ನೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ.
ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜಿಲ್ಲೆಗೆ ಇದೇ 19 ರಂದು (ಮಂಗಳವಾರ)ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ 20 ಮತ್ತು 21 ರಂದು ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





