ರಾಷ್ಟ್ರೀಯ ವಿಕಾಸ್ ಯೋಜನೆಯಡಿಯಲ್ಲಿ ಸಿರಿಧಾನ್ಯಗಳನ್ನು ಬೆಳೆಯುವಂತೆ ಉತ್ತೇಜಿಸಲು raita siri ಯೋಜನೆಯನ್ನು ಕೃಷಿ ಇಲಾಖೆ ಅನುಷ್ಠಾನಗೊಳಿಸಿದೆ.ಇತ್ತೀಚೆಗೆ ರೈತರು ಸಿರಿಧಾನ್ಯಗಳನ್ನು ಬೆಳೆಯುವುದನ್ನು ಕೈಬಿಟ್ಟಿರುವುದರಿಂದ ಸರ್ಕಾರ ಸಿರಿಧಾನ್ಯ ಬೆಳೆಗಳಿಗೆ ಉತ್ತೇಜನ ನೀಡಲು ರೈತಸಿರಿ ಯೋಜನೆಯನ್ನು ಜಾರಿಗೊಳಿಸಿದೆ.

ರೈತರು ಸಿರಿಧಾನ್ಯಗಳನ್ನು ಬೆಳೆಯುವಂತೆ ಉತ್ತೇಜಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತ ಸಿರಿ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಹೇರಳವಾಗಿ ಪೌಷ್ಠಿಕಾಂಶ ಹೊಂದಿರುವ ಸಿರಿಧಾನ್ಯಗಳಾದ ಊದಲು, ನವಣೆ, ಕೊರಲೆ, ಹಾರಕ, ಅರ್ಕ, ಬರಗು ಮತ್ತು ಸಾಮೆಗಳ ಉತ್ಪಾದನೆ ಹೆಚ್ಚಿಸುವ ನಿಲುವು ಕೃಷಿ ಇಲಾಖೆ ಕೈಗೊಂಡಿದೆ.

ಸಿರಿಧಾನ್ಯಗಳಿಗೆ ಮಾರುಕ್ಟೆಯಲ್ಲಿ ಬೇಡಿಕೆಯೂ ಹೆಚ್ಚಾಗುತ್ತಿದೆ.  ಈ ಅಗಾಧವಾದ ಪೌಷ್ಠಿಕಾಂಶ ಹೊಂದಿರುವ ಸಿರಿಧಾನ್ಯಗಳನ್ನು ರೈತರು ಕೈಬಿಡುತ್ತಿರುವುದರಿಂದ ಪಾರಂಪರಿಕ ಬೀಜಗಳು ನೇಪಥ್ಯಕ್ಕೆ ಸರಿಯುತ್ತಿವೆ. ಯಾವುದೇ ರಾಸಾಯನಿಕವಿಲ್ಲದೆ ಬೆಳೆಯುವ ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಸರ್ಕರಾರದಿಂದ ಸಿಗುವ ಪ್ರೋತ್ಸಾಹ ಧನದ ಮಾಹಿತಿಯ ಕೊರತೆಯಿಂದಾಗಿ ಸಿರಿಧಾನ್ಯಗಳು ಕಣ್ಮರೆಯಾಗುತ್ತಿದೆ.

2020-21ನೇ ಸಾಲಿನಲ್ಲಿ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾವೆ ಮತ್ತು ಬರಗು ಬೆಳೆಗಳನ್ನು ಬೆಳೆದ ರೈತರುಗಳಿಗೆ ಬೆಳೆ ಸಮೀಕ್ಷೆ ಆಧಾರದ ಮೇರೆಗೆ ಪರಿಶೀಲಿಸಿ ಒಟ್ಟು 10 ಸಾವಿರ ರೂಪಾಯಿ ಪ್ರತಿ ಹೆಕ್ಟೇರ್ ನಂತೆ ಗರಿಷ್ಠ ಎರಡು ಹೆಕ್ಟೇರ್ ಗೆ ಮಾತ್ರ ಸೀಮಿತವಾಗುವಂತೆ ಫಲಾನುಭವಿಗಳಿಗೆ ನೇರ ಸೌಲಭ್ಯ ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಈ ಯೋಜನೆಯ ಲಾಭ ಪಡೆಯಲು ರೈತರು ಬೆಳೆ ಸಮೀಕ್ಷೆ ಕಡ್ಡಾಯವಾಗಿ ಕೈಗೊಳ್ಳಬೇಕು. ತಮ್ಮ ವ್ಯಾಪ್ತಿಗೆ ಬರುವ ರೈತ ಸಂಪರ್ಕ ಕೇಂದ್ರದಲ್ಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಹಿಂದುಳಿದ ವರ್ಗದ ರೈತರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಿರಿಧಾನ್ಯಗಳನ್ನು ಬೆಳೆಯಲು ಕಡಿಮೆ ನೀರು ಬೇಕು. ಕ್ರಿಮಿನಾಶಕಗಳ ಅವಶ್ಯಕತೆಯಿಲ್ಲ. ಬೆಳೆಯಬಹುದಾದ ಈ ಸಿರಿಧಾನ್ಯಗಳು ಹೆಚ್ಚಿನ ಪೌಷ್ಠಿಕಾಂಶಗಳನ್ನು ಹೊಂದಿರುತ್ತದೆ. ಹೃದಯದ ಕಾಯಿಲೆಗಳು ಹಾಗೂ ಮಧುಮೇಹವುಳ್ಳವರಿಗೆ ವೈದ್ಯರು ಸಿರಿಧಾನ್ಯಗಳನ್ನು ಸೇವಿಸಬೇಕೆಂದು ಸಲಹೆ ನೀಡುತ್ತಾರೆ.

ಸಹಾಯಧನ ಪಡೆಯುವುದು ಹೇಗೆ (How to get subsidy under raita siri scheme)

ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿಗಳಂತೆ ಗರಿಷ್ಠ 2 ಹೆಕ್ಟೇರ್ಗೆ ಸಹಾಯಧನ ನೀಡಲಿದೆ. ಬೆಳೆ ಸಮೀಕ್ಷೆಯಲ್ಲಿ ಸಿರಿಧಾನ್ಯಗಳು ನಮೂದು ಆಗಿರಬೇಕು.  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಹಿಂದುಳಿದ ರೈತರಿಗೆ ಆದ್ಯತೆ ನೀಡಲಾಗುವುದು.

ಬಿತ್ತನೆಯಾದ ನಂತರ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಹೊಲಕ್ಕೆ ಭೇಟಿ ನೀಡಿ ಜಿಪಿಎಸ್ ಆಧಾರಿತ ಫೊಟೊ ತೆಗೆದು ಯೋಜನೆಯ ವೆಬ್ಸೈಟ್ ಗೆ ಅಳವಡಿಸುತ್ತಾರೆ. ನಂತರ ಸರ್ಕಾರ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಪ್ರೋತ್ಸಾಹ ಹಣವನ್ನು ಎರಡು ಕಂತೆಗಳಲ್ಲಿ ಜಮೆ ಮಾಡುತ್ತದೆ.

ಸಿರಿಧಾನ್ಯ ಬೆಳೆಯಲು ಆಸಕ್ತಿಯಿರುವ ಹಾಗೂ ಈಗಾಗಲೇ ಬಿತ್ತನೆ ಮಾಡಿರುವ ರೈತರು ರೈತಸಿರಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿ ಪ್ರೋತ್ಸಾಹಧನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.

Leave a Reply

Your email address will not be published. Required fields are marked *