ರೈತರಿಗೆ ಗುಡ್ ನ್ಯೂಸ್ ಈ ರೈತರ ಖಾತೆಗೆ ಬೆಳೆ ವಿಮೆ ಜಮೆ

Written by Ramlinganna

Updated on:

 Bele vime hana jame : ರೈತರ ಖಾತೆಗೆ ಈಗಾಗಲೆ ಬೆಳೆ ವಿಮೆ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ರೈತರು ತಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ವಿಮೆ ಮಾಡಿಸಿದ ರೈತರು ತಮಗೆ ಯಾವ ಬೆಳೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಜಮೆ ಆಗುತ್ತಿದೆ. ಯಾವ ಯಾವ ಬೆಳೆಗೆ ವಿಮೆ ಹಣ ಜಮೆಯಾಗಿದೆ? ಯಾವಾಗ ಬೆಳೆ ವಿಮೆ ಹಣ ಜಮೆಯಾಗಿದೆ? ಬೆಳೆ ವಿಮೆ ಮಾಡಿಸಿದ ರೈತರ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನೆಲ್ಲಾ ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Bele vime hana jame ಬೆಳೆ ವಿಮೆ ಹಣ ಜಮೆ ಆಗಿದ್ದನ್ನು ಚೆಕ್ ಮಾಡುವುದು ಹೇಗೆ?

ರೈತರು ತಮಗೆ ಬೆಳೆ ವಿಮೆ ಹಣ ಜಮೆಯಾಗಿದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಮುಂಗಾರು ಹಂಗಾಮಿನ ಬೆಳೆ ವಿಮೆ ಚೆಕ್ ಮಾಡಬೇಕೆಂದುಕೊಂಡ್ದಿದರೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ / Go ಮೇಲೆ ಕ್ಲಿಕ್ ಮಾಡಬೇಕು.ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

Farmer’s ಕಾಲಂ ಕೆಳಗಡೆ

Premium Calcualtor, Crop Your can Insure, Check status, Know your insurance co., Find Gram panchayat and crop insurance Detail on survey No ಹೀಗೆ ಆಯ್ಕೆಗಳು ಕಾಣಿಸುತ್ತವೆ. ಇದರಲ್ಲಿ ನೀವು ಚೆಕ್ ಸ್ಟೇಟಸ್ Check Status ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಪ್ರೊಪೋಸಲ್ ಮೊಬೈಲ್ ನಂಬರ್ ಹಾಗೂ ಆಧಾರ್ ನಂಬರ್ ಹೀಗೆ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Mobile No ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ಹಾಕಬೇಕು. ಇದಾದ ನಂತರ Search ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ನಿಮ್ಮ ಜಮೀನಿನ ಅಳತೆ Mobile ನಲ್ಲೇ ಹೀಗೆ ಮಾಡಿ

ಆಗ ಇನ್ನೊಂದು ಪೇಜ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.ಅಲ್ಲಿ ನೀವು ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು.  ಆಗ ತೆರೆದುಕೊಳ್ಳುವ ಮತ್ತೊಂದು ಪೇಜ್ ನಲ್ಲಿ View Detail ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಯಾವ ಬೆಳೆಗೆ ವಿಮೆ ಮಾಡಿಸಿದ್ದೀರೀಹಾಗೂ ನಿಮಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿ ಕಾಣಿಸುತ್ತದೆ.

Bele vime hana jame  ನಿಮಗೆ ವಿಮೆ ಹಣ ಜಮೆಯಾಗಿಲ್ಲವೇ?

ನಿಮಗೆ ವಿಮೆ ಹಣ ಜಮೆಯಾಗಿಲ್ಲವಾದರೆ ನೀವು ನಿಮ್ಮ ವಿಮಾ ಕಂಪನಿಗೆ ದೂರು ನೀಡಿರಬೇಕು. ಹೌದು, ನಿಮ್ಮ ವಿಮಾ ಕಂಪನಿಯ ಸಿಬ್ಬಂದಿಗಳು ನಿಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡಿರಿಬೇಕು. ಆಗ ಮಾತ್ರ ನಿಮಗೆ ಬೆಳೆ ವಿಮೆ ಹಣ ಜಮೆಯಾಗುವ ಸಾಧ್ಯತೆಯಿದೆ. ನೀವು ಬೆಳೆ ವಿಮೆ ಕಂಪನಿಗೆ ದೂರು ನೀಡಿಲ್ಲವಾದರೆ ಬೆಳೆ ವಿಮೆ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

Leave a Comment