Ration card correction : ರೇಶನ್ ಕಾರ್ಡ್ ತಿದ್ದುಪಡಿ ಮಾಡಿಸಲಿಚ್ಚಿಸುವ ಸಾರ್ವಜನಿಕರಿಗೆ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದೆ.
ಹೌದು, ಪಡಿತರ ಚೀಟಿಯಲ್ಲಿ ತಿದ್ದುಪಡಿ, ಹೆಸರು ಸೇರ್ಪಡೆ ಹಾಗೂ ತೆಗೆದು ಹಾಕುವುದು ಸೇರಿದಂತೆ ವಿಳಾಸ ಬದಲಾವಣೆ ಮಾಡಲು ಅವಧಿ ವಿಸ್ತರಣೆ ಮಾಡಲಾಗಿದೆ.
ಹೊಸ ಪಡಿತರ ಚೀಟಿಯಲ್ಲಿ ತಿದ್ದುಪಟಿ ಸೇವೆಗಳ ಅವಧಿಯನ್ನು ಮೇ 8 ರಿಂದ ಮುಂದಿನ ವರ್ಷ 2027 ರ ಮಾರ್ಚ್ 31 ರವರೆಗೆ ಕಾಲಾವಕಾಶ ನೀಡಲಾಗಿದೆ.
ಸಾರ್ವಜನಿಕರು ಹತ್ತಿರದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಈ ಸೌಲಭ್ಯ ಪಡೆಯಬಹುದು ಎಂದು ಆಹಾರ ಇಲಾಖೆ ಉಪ ನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.
ಪಡಿತರ ಚೀಟಿ ತಿದ್ದುಪಡಿ ಹೆಸರು ಸೇರ್ಪಡೆ, ತೆಗೆದು ಹಾಕುವುದು, ವಿಳಾಸ ಅಥವಾ ನ್ಯಾಯಬೆಲೆ ಅಂಗಡಿ ಬದಲಾವಣೆ ಹಾಗೂ ಇಕೆವೈಸಿ ಪ್ರಕ್ರಿಯೆಗಳಿಗೆ 25 ರೂಪಾಯಿ ನಿಗದಿಪಡಿಸಲಾಗಿದೆ.
ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿ ಅಥವಾ ಮೂರನೇ ವ್ಯಕ್ತಿಗಳ ಸಂಪರ್ಕಿಸಿ ಆಮಿಷಕ್ಕೆ ಒಳಗಾಗಬಾರದು. ಸರ್ಕಾರ ನಿಗದಿಪಡಿಸಿದ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ಯಾರಿಗೂ ನೀಡಬಾರದು.
ಅರ್ಜಿ ವಿಲೇವಾರಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಆಯಾ ತಾಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಶನ್ ಕಾರ್ಡ್ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಿ
ರೇಷನ್ ಕಾರ್ಡ್ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://ahara.karnataka.gov.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಪಡಿತರ ಚೀಟಿ ತೋರಿಸಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ನಿಮ್ಮ ರೇಷನ್ ಕಾರ್ಡ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬಹುದು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅರ್ಜಿ ಆಹ್ವಾನ
ಸರ್ಕಾರದಿಂದ ಬಂದಿರುವ ಪಟ್ಟಿಯಲ್ಲಿನ ಇ ಶ್ರಮ ಕಾರ್ಡ್ ಹೊಂದಿರುವ ಕಾರ್ಮಿಕ ವರ್ಗದವರಿಗೆ ಹೊಸ ಪಡಿತರ ಕಾರ್ಡಿಗೆ ಅರ್ಜಿ ಹಾಕಲು, ಹೊಸ ಪಡಿತರ ಕಾರ್ಡಿಗೆ
ಅರ್ಜಿ ಹಾಕಲು, ಹೊಸ ಪಡಿತರ ಕಾರ್ಡಿಗೆ ಅರ್ಜಿ ಸಲ್ಲಿಸಿದಲ್ಲಿ ಸರ್ಕಾರದಿಂದ ಹೊರಡಿಸಲಾದ ವೈದ್ಯಕೀಯ ಚಿಕಿತ್ಸೆ ಪಟ್ಟಿಯಲ್ಲಿನ ತುರ್ತು ಚಿಕಿತ್ಸೆಗೆ ಮಂಜೂರಾತಿ ನೀಡಲು ತುರ್ತು ವೈದ್ಯಕೀಯಚಿಕಿಕ್ತೆಸ ಪಟ್ಟಿಯಲ್ಲಿನ ತುರ್ತು ಚಿಕಿತ್ಸೆಗೆ ಮಂಜೂರಾತಿ ನೀಡಲು, ತುರ್ತು ವೈದ್ಯಕೀಯ ಚಿಕಿತ್ಸೆಯಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಸಾರ್ವಜನಿಕರು ಅ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ration card correction ರೇಶನ್ ಕಾರ್ಡ್ ಪ್ರಯೋಜನಗಳು
ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ, ಗೋಧಿ, ಸಕ್ಕರೆ ಮುಂತಾದ ಅಗತ್ಯ ವಸ್ತುಗಳ ಕಡಿಮೆ ದರದಲ್ಲಿ ಪಡೆಯಬಹುದು
ವಾಸಸ್ಥಳ ಪ್ರಮಾಣ ಪತ್ರ, ಪಾಸ್ ಪೋರ್ಟ್ ಮತ್ತು ಇತರೆ ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆಯಲು ಇದು ಪ್ರಮುಖ ವಿಳಾಸದ ಪುರಾವೆಯಾಗಿದೆ.
ಇದನ್ನೂ ಓದಿ : ಭಾಗ್ಯಲಕ್ಷ್ಮೀ ಯೋಜನೆ 18 ವರ್ಷ ಪೂರ್ಣಗೊಂಡ ಮಕ್ಕಳ ಖಾತೆಗೆ ಹಣ ಜಮಾ
ಆರೋಗ್ಯ ಯೋಜನೆಗಳು ಮತ್ತು ಇತರ ಸಾಮಾಜಿಕ ಭದ್ರತಾ ಯೋಜನೆಗಳಿಗೆ ರೇಷನ್ ಕಾರ್ಡ್ ಅಗತ್ಯವಾಗಿದೆ.
ಅಂತ್ಯೋದಯ ಅನ್ನ ಯೋಜನೆ
ಅತ್ಯಂತ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವುದು
ಬಿಪಿಎಲ್ ರೇಷನ್ ಕಾರ್ಡನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುವುದು
ಎಪಿಎಲ್ ಕಾರ್ಡನ್ನು ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ನೀಡಲಾಗುವುದು.





