Ration card list check : ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80 ಸಾವಿರ ಕಾರ್ಡ್ ಗಳನ್ನು ರದ್ದು ಮಾಡುವ ಬದಲು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ.
ಇಲ್ಲೇ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ
ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್ , ಬಿಪಿಎಲ್ ಕಾರ್ಡ್ ಇದ್ದರವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಿಪಿಎಲ್ ಗೆ ಅರ್ಹವಲ್ಲದ ಕಾರ್ಡಗಳನ್ನು ಮಾತ್ರ ಎಪಿಎಲ್ ಗೆ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಇದ್ದರೂ ಗೃಹಲಕ್ಷ್ಮೀ ಹಣ ಬರುತ್ತದೆ. ಆದರೆ ಎಪಿಎಲ್ ಇರಲಿ, ಬಿಪಿಎಲ್ ಇರಲಿ, ತೆರಿಗೆ ಕಟ್ಟದಿದ್ದರೆ ಮಾತ್ರ ಹಣ ಸಂದಾಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.
Ration card list check ರೇಷನ್ ಕಾರ್ಡ್ ಲಿಸ್ಟ್ ನಿಂದ ನಿಮ್ಮ ಹೆಸರು ರದ್ದಾಗಿದೆಯೇ? ಇಲ್ಲೇ ಚೆಕ್ ಮಾಡಿ
ರೇಶನ್ ಕಾರ್ಡ್ ಲಿಸ್ಟ್ ನಿಂದ ನಿಮ್ಮ ಹೆಸರು ರದ್ದಾಗಿದೆಯೇ ಎಂಬುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಬಲಗಡೆ ಕೆಲವು ಆಯ್ಕೆಗಳು ಕಾಣುತ್ತವೆ. ವಿಧಾನ, ಇ ಪಡಿತರ ಚೀಟಿ, ಇ-ಸ್ಥತಿ, ಇ ನ್ಯಾಯಬೆಲೆ ಅಂಗಡೆ, ಸಾರ್ವಜನಿಕ ದೂರು ಮತ್ತು ಬಹುಮಾನ ಯೋಜನೆ, ಎಸ್.ಎಂಎಸ್ ಸೇವೆ, ಸೌಕರ್ಯ ಕೇಂದ್ರಗಳು, ಅಂಕಿ ಅಂಶ, ಟೆಂಡರ್, ದರಗಳು, ಹೀಗೆ ವಿವಿಧ ಆಯ್ಕೆಗಳು ಕಾಣುತ್ತವೆ.
ಅಲ್ಲಿ ನೀವು ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನಿ ಕೆಲವು ಆಯ್ಕೆಗಳು ಕಾಣಿಸುತ್ತವೆ. ಹೊಸ ಪಡಿತರ ಚೀಟಿ, ಪಡಿತರ ಚೀಟಿ ತೋರಿಸು, ಹಂಚಿಕೆ, ಪಡಿತರಎತ್ತುವಳಿ ಸ್ಥಿತಿ, ಅಪ್ಡೇಟ್ ಆಧಾರ್, ರದ್ದುಗೊಳಿಸಲಾದ /ತಡೆಹಿಡಿಯಲಾದ ಪಟ್ಟಿ, ಹಳ್ಳಿ ಪಟ್ಟಿ ವಿತರಣೆಯಾಗುವ ಹೊಸ ಪಡಿತರ ಚೀಟಿ ಹೀಗೆ ಹಲವಾರು ಆಯ್ಕೆಗಳು ಕಾಣುತ್ತದೆ.
rejected ration card list ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಿ
ಅಲ್ಲಿ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ತೆರೆದುಕೊಳ್ಳುತ್ತದೆ.ಅಲ್ಲಿ ಜಿಲ್ಲೆ ತಾಲೂಕು, ಗ್ರಾಮ ಪಂಚಾಯತ್, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಯಾರ ಯಾರ ಹೆಸರಿನಲ್ಲಿ ಪಡಿತರ ಚೀಟಿ ಇದೆ ಎಂಬ ಪಟ್ಟಿ ಕಾಣಿಸುತ್ತದೆ.
Rejected ration card list ರದ್ದುಗೊಳಿಸಲಾದ/ತಡೆಹಿಡಿಯಲಾದ ರೇಶನ್ ಕಾರ್ಡ್ ಫಲಾನುಭವಿಗಳ ಹೆಸರು
ಪಡಿತರ ಚೀಟಿ ಹೊಂದಿದವರು ತಮ್ಮ ಹೆಸರು ರದ್ದುಗೊಳಿಸಲಾಗಿದೆಯೇ ಎಂಬುದನ್ನು ಚೆಕ್ ಮಾಡಲು ರದ್ದುಗೊಳಿಸಲಾದ ತಡೆಹಿಡಿಯಲಾದ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ಆಗ ಜಿಲ್ಲೆ, ತಾಲೂಕು, ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ಮಾಡಿಕೊಳ್ಳಬೇಕು.ನಂತರ ಗೊ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಬೆಳೆ ಹಾನಿ ಪರಿಹಾರ ಚೆಕ್ ಮಾಡಲು ಹೊಸ ಆ್ಯಪ್ ಬಿಡುಗಡೆ
ಆಗ ಯಾರ ಯಾರ ಹೆಸರನ್ನು ತೆಗೆಯಲಾಗಿದೆ. ಯಾವಾಗ ತೆಗೆಯಲಾಗಿದೆ? ಯಾವ ಕಾರಣಕ್ಕಾಗಿ ರದ್ದುಗೊಳಿಸಲಾಗಿದೆ ಎಂಬ ಕಾರಣವನ್ನು ಬರೆಯಲಾಗಿದೆ. ಈ ಆಧಾರದ ಮೇಲೆ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೋ ಅಥವಾ ಉಳಿಸಲಾಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.