ಪಿಎಂ ಕಿಸಾನ್ ನೋಂದಣಿಗೆ ರೇಷನ್ ಕಾರ್ಡ್ ಕಡ್ಡಾಯ

Written by By: janajagran

Updated on:

Rationcard mandatory PM Kisan ಪಿಎಂ ಕಿಸಾನ್ ಯೋಜನೆಯಲ್ಲಿ  ಕೇಂದ್ರ ಸರ್ಕಾರವು ಈಗ ಪ್ರಮುಖ ಬದಲಾವಣೆಯನ್ನು ತಂದಿದೆ.  10ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಬೇಕಾದರೆ ರೇಷನ್ ಕಾರ್ಡ್ (ಪಡಿತರ ಚೀಟಿ) ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯಲ್ಲಿ ಉಳ್ಳವರು ಹೆಚ್ಚು ಲಾಭ ಪಡೆದುಕೊಳ್ಳುತ್ತಿದ್ದಾರೆ. ನಿಜವಾದ ರೈತರಿಗೆ ವಂಚನೆಯಾಗಬಾರದೆಂಬ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ಪಿಎಂ ಕಿಸಾನ್ ಯೋಜನೆಯಲ್ಲಿ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿದ ನಂತರವೇ ಈ ಯೋಜನೆಯ ಲಾಭ ಸಿಗಲಿದೆ. ಇನ್ನೂ ಮುಂದೆ ರೈತರು ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಲಾಭ ಪಡೆಯಲು ಪಡಿತರ ಚೀಟಿಯ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯಗೊಳಿಸಿದೆ. ಇದಕ್ಕಾಗಿ ರೈತರು ನೋಂದಣಿ ಮಾಡುವಾಗ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಘೋಷಣೆ ಪತ್ರದ ದಾಖಲೆಯನ್ನು ಪಿಡಿಎಫ್ ಫಾರ್ಮೆಟ್ ನಲ್ಲಿ ನೋಂದಣಿ ಮಾಡುವಾಗ ಅಪಲೋಡ್ ಮಾಡಬೇಕಾಗುತ್ತದೆ.

Rationcard mandatory PM Kisan  ಪಿಎಂ ಕಿಸಾನ್ ರೇಶನ್ ಕಾರ್ಡ್ 

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡುವಾಗ ಈಗ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಘೋಷಣ ಪತ್ರ ಪ್ರತ್ಯೇಕವಾಗಿ ಸಲ್ಲಿಸಬೇಕಿಲ್ಲ. ಈ ಎಲ್ಲಾ ದಾಖಲೆಗಳನ್ನು ಪಿಡಿಎಫ್ ನಲ್ಲಿ ಸೇವ್ ಮಾಡಿ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ. ಇದರಿಂದ ರೈತರ ಸಮಯವೂ ಉಳಿತಾಯವಾಗುತ್ತದೆ. ಜೊತೆಗೆ ಹೊಸ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ಈಗ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಹಣ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಆದ್ದರಿಂದ ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆದುಕೊಳ್ಳಲಿಕ್ಕಾಗುವುದಿಲ್ಲ. ಎಲ್ಲಾ ದಾಖಲೆಗಳೊಂದಿಗೆ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.

ಏನಿದು ಪಿಎಂ ಕಿಸಾನ್ ಯೋಜನೆ?

ಕೇಂದ್ರ ಸರ್ಕಾರವು 2018 ರಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡುತ್ತದೆ. ರೈತರ ಆರ್ಥಿಕ ಮಟ್ಟ ಸುಧಾರಣೆಯಾಗಲಿ ಕೃಷಿ ಚಟುವಟಿಕೆಗೆ ಸಹಾಯವಾಗಲೆಂದು ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಲಾಗಿದೆ.

ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಈ ಯೋಜನೆಯಡಿ ಈಗಾಗಲೇ 9 ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗಿದೆ. ಅತೀ ಶೀಘ್ರದಲ್ಲಿ 10ನೇ ಕಂತಿನ ಹಣ ಜಮೆ ಮಾಡಲಾಗುವುದು. ಕಳೆದ ವರ್ಷ ಡಿಸೆಂಬರ್ 25 ರಂದು ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಈ ವರ್ಷ ಡಿಸೆಂಬರ್ 15 ರಂದು ಜಮೆ ಮಾಡುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯಡಿ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೆಂಬುದನ್ನು ಚೆಕ್ ಮಾಡಬಹುದು.

  https://pmkisan.gov.in/Rpt_BeneficiaryStatus_pub.aspx 

ಕ್ ಮಾಡಿದಾಗ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ  ರಾಜ್ಯ, ಜಿಲ್ಲೆ, ತಾಲೂಕು ಹಾಗೂ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ  ಹೊಸ beneficiary ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಬಹುದು. ಪಿಎಂ ಕಿಸಾನ್ ಯೋಜನೆಯ ಪಟ್ಟಿಯಲ್ಲಿ   A to Z ಹೆಸರುಗಳು ಕ್ರಮವಾಗಿರುತ್ತವೆ.  ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿ ಕ್ಲಿಕಿ ಮಾಡಿದರೆ ಸಾಕು, ಅಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿಕೊಳ್ಳಬಹುದು. ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೆಂದರೆ ನೀವು 10ನೇ ಕಂತಿನ ಫಲಾನುಭವಿಗಳಾಗುತ್ತೀರಿ.

Leave a Comment