Ration card Number ಹಾಕಿ ನಿಮಗೆಷ್ಟು ಹಣ ಜಮೆ ಆಗಿದೆ ಎಂಬುದನ್ನು ಫಲಾನುಭವಿಗಳು ಈಗ Mobileನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ. ನಿಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲೇ ಚೆಕ್ ಮಾಡಬಹುದು. ಅದುಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿದೆಯೋ ಇಲ್ಲವೋ ಹಾಗೂ ಯಾವ ತಿಂಗಳಲ್ಲಿ ಅಪ್ರೂವ್ ಆಗಿದೆ ಹಾಗೂ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನೆಲ್ಲಾ ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಈಗ 8ನೇ ಕಂತಿನ ಹಣ ಇದೇ ತಿಂಗಳು ಜಮೆಯಾಗುವ ಸಾಧ್ಯತೆಯಿದೆ. ಹಾಗಾಗಿ ಒಮ್ಮೆ ನೀವು ಗೃಹಲಕ್ಷ್ಮೀ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಇಲ್ಲಿ ಕೇವಲ ನಿಮ್ಮ ರೇಶನ್ ಕಾರ್ಡ್ ಹಾಕಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ? ಇಲ್ಲಿದೆ ನೋಡಿ ಮಾಹಿತಿ.
Ration card Number ಹಾಕಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ನಿಮಗೆ ಮಾಹಿತಿ ಕಣಜ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು. ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎ ಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ಈ ಯಾವ ತಿಂಗಳಲ್ಲಿ ಯಾವ ದಿನಾಂಕದಂದು ಹಣ ಜಮೆಯಾಗಿದೆ? ಹಾಗೂ ಎಷ್ಟು ಹಣ ಜಮಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಗೃಹಲಕ್ಷ್ಮೀ ಯೋಜನೆಯ ಅರ್ಹತೆಗಳು
ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಸಿದರೆ ಸಾಲದು, ಈ ಯೋಜನೆಯ ಸೌಲಭ್ಯ ಪಡೆಯಲು ಕೆಲವು ಅರ್ಹತೆಗಳು ಹೊಂದಿರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ : 105 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ- ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ
ಹೌದು, ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯುವ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.
ಗೃಹಲಕ್ಷ್ಮೀ ಯೋಜನೆಯ ಅನರ್ಹತೆಗಳು
ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್.ಟಿ ರಿಟರ್ನ್ಸ್ ಪಾವತಿದಾರರಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ.
ಈ ಲೇಖನ ನಿಮಗೆ ಉಪಯುಕ್ತವಾಗಿದ್ದರೆ ದಯವಿಟ್ಟು ನಿಮ್ಮ ಸಂಬಂಧಿಸಿಕರ ಗ್ರೂಪ್ ಗಳಿಗೆ ಕಳಿಸಬಹುದು. ಏಕೆಂದರೆ ಬಹುತೇಕ ಜನರಿಗೆ ಸ್ಟೇಟಸ್ ಚೆಕ್ ಮಾಡುವ ಲಿಂಕ್ ಗೊತ್ತಿರುವುದಿಲ್ಲ. ಹಾಗಾಗಿ ಒಮ್ಮೆ ನಿಮ್ಮ ಗ್ರೂಪ್ ಗೆ ಶೇರ್ ಮಾಡಿ ಸಹಕರಿಸಬಹುದು.