ಕಲಬುರಗಿ ಜಿಲ್ಲೆಯ ಚಿತ್ತಾಪುರ, ಸೇಡಂ, ಅಫಜಲ್ಪುರ, ಜೇವರ್ಗಿ, ಆಳಂದ, ಕಲಬುರಗಿ ನಗರ , ಕಲಬುರಗಿ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ತಾಪುರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 12 ಅಂಗನವಾಡಿ ಹಾಗೂ 26 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಚ್ 24 ರಿಂದ ಏಪ್ರೀಲ್ 24 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಕಚೇರಿಯಲ್ಲಿ ತೆಗೆದುಕೊಂಡು ಭರ್ತಿ ಮಾಡಿ ಕಚೇರಿಯಲ್ಲಿಯೇ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕಚೇರಿ ವಿಳಾಸ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಚಿತ್ತಾಪುರ ತಹಶೀಲ ಕಾರ್ಯಾಲಯ ಹಿಂದುಗಡೆ ಎಸಿ.ಬಿ.ಐ ಬ್ಯಾಂಕ್ ಹತ್ತಿರ ಚಿತ್ತಾಪುರ, 585211, ಫೋನ್ ನಂಬರ್ 08474 236993 ಗೆ ಸಂಪರ್ಕಿಸಲು ಕೋರಲಾಗಿದೆ.
ಸೇಡಂ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಸೇಡಂ ತಾಲೂಕಿನಲ್ಲಿ ಹೊಸದಾಗಿ ಮಂಜೂರಾದ ಹಾಗೂ ವಿವಿಧ ಕಾರಣಗಳಿಂದ ತೆರವಾದ 5 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 40 ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ನಿಮ್ಮ ಜಮೀನಿನ ಟಿಪ್ಪಣಿ, ಮೂಲ ಸರ್ವೆ ಪ್ರತಿ, ಪೋಡಿ ಟಿಪ್ಪಣಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರೀಲ್ 24 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು. 19 ರಿಂದ 35 ವರ್ಷದೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಸೇಡಂ ಅಭಿವೃದ್ಧಿ ಯೋಜನಾಧಿಕಾರಿಗಲ ಕಚೇರಿಯನ್ನು ಸಂಪರ್ಕಿಸಬಹುದು.
ಆಳಂದ ತಾಲೂಕಿನಲ್ಲಿಯೂ ಅರ್ಜಿ ಆಹ್ವಾನ
ಆಳಂದ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 16 ಆಂಗನವಾಡಿ ಕಾರ್ಯಕರ್ತೆಯರ ಹಾಗೂ 46 ಜನ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಏಪ್ರೀಲ್ 24 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9844662718 ಗೆ ಸಂಪರ್ಕಿಸಲು ಕೋರಲಾಗಿದೆ.
ಅಫಜಲ್ಪೂರ ತಾಲೂಕಿನಲ್ಲಿಯೂ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಅಫಜಲ್ಪೂರ ತಾಲೂಕಿನಲ್ಲಿ ಹೊಸದಾಗಿ ಮಂಜೂರಾದ ಹಾಗೂ ವಿವಿಧ ಕಾರಣಗಳಿಂದ ತೆರವಾದ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 64 ಅಂಗನವಾಡಿ ಸಹಾಯಕಿಯರ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ಈ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ. ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಫಜಲ್ಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಏಪ್ರೀಲ್ 24 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಖಾಲಿ ಹುದ್ದೆಗಳ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಫಜಲ್ಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಜೇವರ್ಗಿ ತಾಲೂಕಿನಲ್ಲಿಯೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಜೇವರ್ಗಿ ತಾಲೂಕಿನಲ್ಲಿ ಖಾಲಿಯಿರುವ 30 ಜನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 63 ಸಹಾಯಕಿಯರ ಹುದ್ದೆಗಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕೃರಣ ಹೊಂದಿರುವ ಸೂಕ್ತ ದಾಖಲೆಗಳನ್ನು ಏಪ್ರೀಲ್ 24 ರೊಳಗೆ ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಕಲಬುರಗಿ ಗ್ರಾಮೀಣ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 18 ಅಂಗನವಾಡಿ ಕಾರ್ಯಕರ್ತೆಯರು, 82 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಏಪ್ರೀಲ್ 24 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08472 278654 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ ನಗರ ವ್ಯಾಪ್ತಿಯಲ್ಲಿಯೂ ಅರ್ಜಿ ಆಹ್ವಾನ
ಕಲಬುರಗಿ ನಗರ ವ್ಯಾಪ್ತಿಯಲ್ಲಿ ಖಾಲಿಯಿರುವ 57 ಅಂಗನವಾಡಿ ಸಹಾಯಕಿಯರ ಹುದ್ದಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿ ನ ಮಾಹಿತಿತಾಗಿ 08472 278661 ಗೆ ಸಂಪರ್ಕಿಸಲು ಕೋರಲಾಗಿದೆ.