ತೊಗರಿ ಬೆಳೆ ಹಾನಿಯಾದ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆ

Written by Ramlinganna

Updated on:

Redgram crop damage compensation  ನೆಟೆರೋಗದಿಂದ ತೊಗರಿ ಬೆಳೆ ಹಾಳಾಗಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮರುಗೇಶ ನಿರಾಣಿ ಹೇಳಿದ್ದಾರೆ.

ಅವರು ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತೊಗರಿ ನೆಟೆರೋಗ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾಗಿದೆ. ಆದರೆ ಯಾವ ರೀತಿ ಪರಿಹಾರ ನೀಡಬೇಕು ಎಂಬುದು ಅಂತಿಮವಾಗಿಲ್ಲ. ವಿಶೇಷ ಪ್ಯಾಕೇಜ್ ಕೊಡಬೇಕೋ ಅಥವಾ ಪರಿಹಾರ ನೀಡಬೇಕೆಂಬುದರ ಕುರಿತು ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನೆಟರೋಗದಿಂದ ತೊಗರಿ ಹಾನಿಯಯಾಗಿರುವ ಬಗ್ಗ ಅಧಿಕಾರಿಗಳು ಪ್ರಾಥಮಿಕ ವರದಿಯಲ್ಲಿತಿಳಿಸಿದ್ದಾರೆ. ಇನ್ನೊಮ್ಮೆ ವರದಿ ತರಿಸಿಕೊಳ್ಳಲಾಗುವುದು . ಈ ಭಾಗದಲ್ಲಿ ಬೆಳೆಯುವ ತೊಗರಿ ಬೆಳೆ ಹಾನಿಯಾಗಿರುವುದರಿಂದ ರೈತ ಸಂಕಷ್ಟಕ್ಕೆ ಒಳಗಾಗಿರುವುದು ಸರ್ಕಾರದ ಗಮನದಲ್ಲಿದೆ ಎಂದರು.

Redgram crop damage compensation  ನಿಮಗೆ ಬೆಳೆ ಹಾನಿ ಪರಿಹಾರ ಹಣ ಯಾವ ಬೆಳೆಗೆ ಜಮೆಯಾಗಿದೆ ಇಲ್ಲೇ ಚೆಕ್ ಮಾಡಿ

2022-23ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಸುರಿದ ಅತೀವೃಷ್ಟಿಯಿಂದ ಅಪಾರ ಬೆಳೆ ಹಾಳಾಗಿತ್ತು. ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಮಾಡಲಾಗಿತ್ತು.ಆದರೆ ನಿಮಗೆ ಯಾವ ಬೆಳೆಗೆ ಬೆಳೆ ಹಾನಿ ಪರಿಹಾರ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಬೆಳೆ ಹಾನಿ ಪರಿಹಾರ ಯಾವ ಬೆಳೆಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಅಲ್ಲಿ ಓಪನ್ ಆಗುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಕಾಲಾಮಿಟಿನಲ್ಲಿ ಫ್ಲಡ್ ಆಯ್ಕೆ ಮಾಡಿ ಸೆಲೆಕ್ಟ್ ಇಯರ್ ನಲ್ಲಿ 2022-23 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಂಬರ್ ಮತ್ತು ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಯಾವ ಬೆಳೆಗೆ ಎಷ್ಟು ಎಕರೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ನೆಟೆರೋಗದಿಂದ ಬೆಳೆ  ಹಾನಿ 500 ಕೋಟಿ ಪ್ಯಾಕೇಜಿ ನೀಡಲು ಆಗ್ರಹ

ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಪ್ರತಿ ಎಕರೆಗೆ 25000 ರೂಪಾಯಿ ನಷ್ಟ ಪರಿಹಾರ ಬಿಡುಗಡೆ ಮಾಡಬೇಕೆಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಜಮೀನು ಹಾಗೂ ಅಕ್ಕಪಕ್ಕದ ಜಮೀನುಗಳಿಗೆ ಹೋಗಲು ದಾರಿವಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

2022-23ನೇ ಸಾಲಿನಲ್ಲಿ 4.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತಕ್ತನೆ ಮಾಡಲಾಗಿತ್ತು. ಆದರೆ  ಕಲಬುರಗಿ ಜಿಲ್ಲೆಯಲ್ಲಿ ಸುರಿದ ಅನಿಯಮಿತ ಮಳೆಯಿಂದಾಗಿ ಸುಮಾರು 1.30 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶ ಸಂಪೂರ್ಣ ಹಾಳಾಗಿದೆ. ಎಡೆಬಿಡದೆ ಸುರಿದ ಮಳೆಯ ಪರಿಣಾಮ ಅತೀವೃಷ್ಟಿ  ಸೃಷ್ಟಿಯಾಗಿ ತೊಗರಿ ಗಿಡಗಳು ಒಣಗತೊಡಗಿದ್ದು, ಈಗ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡನಂತರ ಅಪಾರ ಬೆಳೆ ಹಾಳಾಗಿದೆ. ಈ ರೈತರಿಗೆ ಪರಿಹಾರ ನೀಡಬೇಕೆಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡುವುದರೊಂದಿಗೆ ಬೆಳೆ ಹಾಳಾದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ನಷ್ಟ ಪರಿಹಾರ ಬಿಡುಗಡೆ  ಮಾಡಬೇಕೆಂದು ಸಿಎಂಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ನೆಟರೋಗಕ್ಕೆ 10426 ಹೆಕ್ಟೆರ್ ತೊಗರಿ ಬೆಳೆ ಹಾನಿ

ಕಲಬುರಗಿ ಜಿಲ್ಲೆಯಂತೆ ಬೀದರ್ ಜಿಲ್ಲೆಯಲ್ಲಿಯೂ ತೊಗರಿ ಬೆಳೆ ನೆಟೆರೋಗಕ್ಕೆ ತುತ್ತಾಗಿದೆ. ಇದೇ ರೀತಿ ಇತರ ಜಿಲ್ಲೆಗಳಲ್ಲಿಯೂ ನೆಟರೋಗಕ್ಕೆ ತೊಗರಿ ಬೆಳೆ ಹಾಳಾಗಿದೆ. ಬೀದರ್ ಜಿಲ್ಲೆಯಲ್ಲಿ ನೆಟರೋಗಕ್ಕೆ ತುತ್ತಾಗಿ ತೊಗರಿ ಬೆಳೆ 10 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಹಾಳಾಗಿದೆ.

Leave a Comment