ನೆಟೆ ರೋಗದಿಂದ ತೊಗರಿ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ರೈತರ ನೆರವಿಗೆ ಸರ್ಕಾರ ಧಾವಿಸಿದ್ದು, ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.

ಹೌದು,  ಬೀದರ್, ಕಲಬುರಗಿ, ಮತ್ತು ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ  ಬೆಳೆಗೆ ಸಂಬಂಧಿಸಿದ ಬೆಳೆಹಾನಿಯನ್ನುವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿಯಂತೆ ಎನ್.ಡಿ.ಆರ್.ಎಫ್ /ಎಸ್.ಡಿಆರ್.ಎಫ್ ಮಾರ್ಗಸೂಚಿಯಂತೆ ಗರಿಷ್ಠ ಎರಡು ಹಕ್ಟೇರಿಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ.

ಒಟ್ಟು ಮೊತ್ತವು 233 ಕೋಟಿ ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಸಾಯಂಕಾಲ ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಅಧಿಕಾರಗಳ ಜತೆ ಸಭೆ ನಡೆಸಿ ಈ ತೀರ್ಮಾನ ಕೈಗೊಂಡರು.

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಲ್ಲಿ ತಲೆದೋರಿದ ಒಣ/ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೂರು ಜಿಲ್ಲೆಗಳಲ್ಲಿ ಉಲ್ಬಣಗೊಂಡು ಬೆಳೆಹಾನಿಯಾಗಿದೆ.

ಇದನ್ನೂ ಓದಿ : PM kisan ಅರ್ಹ ಮತ್ತು ಅನರ್ಹ ರೈತರ ಪಟ್ಟಿ ಬಿಡುಗಡೆ: ಮೊಬೈಲ್ ನಲ್ಲೆ ಚೆಕ್ ಮಾಡಿ ಯಾವ ಪಟ್ಟಿಯಲ್ಲಿದೆ ನಿಮ್ಮ ಹೆಸರು

ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.128 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಮೂರು ಜಿಲ್ಲೆಗಳು ಸೇರಿ ಒಟ್ಟು 2.2278 ಲಕ್ಷ ಹೆಕ್ಟೇರ್ ವೀಸ್ತೀರ್ಣದಲ್ಲಿ ತೊಗರಿ ಬೆಳ ಸಂಕೀರ್ಣ  ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿದೆ. ಈ ಮೂರು ಜಿಲ್ಲೆಗಳಲ್ಲಿ ತೊಗರಿ ಏಕೈಕ ವಾಣಿಜ್ಯ ಬೆಳೆಯಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಪ್ರತಿ ವರ್ಷದಂತೆ ಈ ವರ್ಷವೂ ನೆಟೆರೋಗದಿಂದ ಬೆಳೆ ಹಾನಿಯಾಗಿತ್ತು. ಆದರೆ ಈ ವರ್ಷ ಹೆಚ್ಚು ಹಾನಿಯಾಗಿತ್ತು.ಈ ಬಾರಿ ಶೇ. 50 ರಷ್ಟು ತೊಗರಿ ಬೆಳೆ ನೆಟೆ ರೋಗದಿಂದ ಹಾಳಾಗಿದೆ.

ಹಾನಿಗೊಳಗಾದ ರೈತರ ನೆರವಿಗೆ ಧಾವಿಸಿದ ಸರ್ಕಾರವು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ತೀರ್ಮಾನಿಸಿ ಪರಿಹಾರ ಘೋಷಿಸಿದೆ.

ಯಾವ ರೈತರಿಗೆ ಪರಿಹಾರ ನೀಡಲಾಗುವುದು?

ನೆಟೆರೋಗದಿಂದ ಬೆಳೆ ಹಾನಿಯಾದ ಯಾವ ಯಾವ ರೈತರಿಗೆ ಪರಿಹಾರ ಹೇಗೆ ನೀಡಲಾಗುವುದು? ರೈತರು ಇದಕ್ಕಾಗಿ ಅರ್ಜಿ ಎಲ್ಲಿ ಸಲ್ಲಿಸಬೇಕು? ಅಥವಾ ಕಲಬುರಗಿ, ಬೀದರ್, ಯಾದಗಿರಿ ಈ ಮೂರು ಜಿಲ್ಲೆಗಳಲ್ಲಿ ತೊಗರಿ ಬೆಳೆದ ಎಲ್ಲಾ ರೈತರಿಗೆ ಪರಿಹಾರ ನೀಡಲಾಗುವುದೋ ಅಥವಾ ಪರಿಶೀಲಿಸಿ ನೀಡಲಾಗುವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ನೆಟೆರೋಗದಿಂದ ಬೆಳೆ ಹಾನಿಯಾಗಿರುವ ರೈತರಿಗಂತು ಪರಿಹಾರ ನೀಡಲಾಗುವುದು.

ಇದನ್ನೂ ಓದಿ: ಈ ಪಟ್ಟಿಯಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ- ನಿಮ್ಮ ಹೆಸರಿದೆಯೇ? ಇಲ್ಲೆ ಚೆಕ್ ಮಾಡಿ

ರೈತ ಸಂಘಟನೆಗಳ ಒತ್ತಾಯಕ್ಕೆ ಸ್ಪಂದನೆ

ಕಲಬುರಗಿ ನಗರದಲ್ಲಿ ಇತ್ತೀಚೆಗೆ ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಲಬುರಗಿ ಬಂದ್ಕರೆ ನೀಡಲಾಗಿತ್ತು.  ತೊಗರಿ ಬೆಳೆದ ರೈತರಿಗೆ ಪರಿಹಾರ ನೀಡಬೇಕೆಂದು ಹಲವಾರು ಸಂಘಟನೆಗಳು ಒತ್ತಾಯ ಸಹ ಮಾಡಿದ್ದರು. ಇದೀಗ ಸರ್ಕಾರದ ತೊಗರಿ ರೈತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿದೆ. ಆದರೆ ರೈತ ಸಂಘಟನೆಗಳು ಎಕರೆಗೆ 25 ಸಾವಿರ ರೂಪಾಯಿಯವರೆಗೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದವು.

Leave a Reply

Your email address will not be published. Required fields are marked *