Redgram support price announced : ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಹೌದು, ತೊಗರಿ ಬೆಳೆಗೆ ಕೇಂದ್ರ ಸರ್ಕಾರವು 7550ರೂಪಾಯಿ ಬೆಂಬಲ ಬೆಲೆ ಘೋಷಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರವು 450 ಪ್ರೋತ್ಸಾಹ ಧನ ಘೋಷಿಸಿದೆ. ರೈತರಿಗೆ ಪ್ರತಿ ಕ್ವಿಂಟಲಿಗೆ 8 ಸಾವಿರ ರೂಪಾಯಿ ನೀಡಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಪ್ರೋತ್ಸಾಹಧನ ನೀಡುವ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದಿಸಿ ಆದೇಶ ಹೊರಡಿಸಿದೆ. ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಲ್ಲಿ 330 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
Redgram support price announced ಬೆಂಬಲ ಬೆಲೆ
2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಬೆಂಬಲ ಬೆಲೆ ರೂ.7,550/- ರ ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ರೂ.450/- ಪ್ರತಿ ಕ್ವಿಂಟಾಲಗೆ, ಸೇರಿ ಒಟ್ಟು ರೂ.8,000/- ಪ್ರತಿ ಕ್ವಿಂಟಾಲ ರಂತೆ ತೊಗರಿ ಖರೀದಿಸಲು ಜವಳಿ, ಕಬ್ಬು ಅಭಿವೃಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಶಿವಾನಂದ ಪಾಟೀಲ್ ಅವರು ಕಳೆದ ಜನವರಿ ತಿಂಗಳಿನಲ್ಲಿ ಭರವಸೆ ನೀಡಿದ್ದರು.
ಈ ಸಂಬಂಧ ಮಾನ್ಯ ಮುಖ್ಯ ಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆಯೂ ಸಹ ಸಹಮತಿ ನೀಡಿದೆ. ಈ ಕುರಿತು ಸಂಭದಿಸಿದ ಇಲಾಖೆಗೆ ತಕ್ಷಣದಿಂದ ಅಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.
ಇದನ್ನೂ ಓದಿ : ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ? ಇಲ್ಲಿದೆ ಮಾಹಿತಿ
ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದ್ದು, ರೈತ ಬಾಂಧವರು ತಮ್ಮ ಹತ್ತಿರದ PACS / FPO / TAPCMS ಗಳಿಗೆ ಭೇಟಿ ನೀಡಿ ನೊಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸುದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
2 ಲಕ್ಷ ರೈತರಿಗೆ 76 ಕೋಟಿ ಬೆಳೆ ವಿಮೆ ಪರಿಹಾರ ಜಮೆ
ಪ್ರಸಕ್ತ 2024-25ನೇ ಸಾಲಿನ ಬೆಳೆ ವಿಮೆ ಸ್ಥಳೀಯ ವಿಕೋಪದಡಿ ಜಿಲ್ಲೆಯ ಒಟ್ಟು 2,03,720 ರೈತರಿಗೆ 76.94 ಕೋಟಿ ರೂಪಾಯಿ ಪರಿಹಾರ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.
ಹೌದು, ರೈತರು ತಮ್ಮ ಬ್ಯಾಂಕುಗಳಿಗೆ ಭೇಟಿ ನೀಡಿ ತಮ್ಮ ಖಾತೆಗೆಪರಿಹಾರ ಹಣ ಜಮೆಯಾಗಿರುವುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ಕಲಬುರಗಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
2023-24 ನೇ ಸಾಲೀನ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಜಮೆಯಾಗಿದೆಯೋಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2024-25 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊದು ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ನಿಮಗೆ Proposal ಹಾಗೂ Mobile No. ಮತ್ತು Aadhaar ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.